ಬೀದರ್/ಹುಮನಾಬಾದ್: ರಾಷ್ಟ್ರೀಯ ಹೆದ್ದಾರಿಯ ವಿವಿಧಡೆ ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 358 ಕೆ.ಜಿ ಗಾಂಜಾ, ಲಾರಿ, ಕಾರು ಸೇರಿದಂತೆ ಅಂದಾಜು 42 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು, 7 ಜನ ಆರೋಪಿಗಳನ್ನು ಬಂಧಿಸುವಲ್ಲಿ ಹುಮನಾಬಾದ ಉಪ ವಿಭಾಗದ ಪೊಲೀಸರು ಯಶ್ವಸಿಯಾಗಿದ್ದಾರೆ.
ವಿವಿಧೆಡೆ ದಾಳಿ ನಡೆಸಿದ ಪೊಲೀಸರು 358 ಕೆ ಜಿಯ ಸುಮಾರು 42 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಬೀದರ್ನಲ್ಲಿ ನಡೆದಿದೆ.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ ಬಾಬು, ”ಗಾಂಜಾ ಸಾಗಣೆ ಮೇಲೆ ವಿಶೇಷ ನಿಗಾವಹಿಸಲಾಗಿದ್ದು, ಡಿ.31 ರಿಂದ ಜನೇವರಿ 11 ವರಗೆ ಹುಮನಾಬಾದ ಉಪ ವಿಭಾಗದ ವಿವಿಧಡೆ ದಾಳಿ ನಡೆಸಲಾಗಿದೆ. ಆಂಧ್ರ ಕಡೆಯಿಂದ ಮಹಾರಾಷ್ಟ್ರದ ಪೂಣೆ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ” ಎಂದರು.