News Kannada
Wednesday, February 01 2023

ಬೀದರ್

ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ಮನ್ನಾಎಖೇಳ್ಳಿಯ ಬಿಜೆಪಿ ಮುಖಂಡರು

BJP leaders from Mannaekhelli join JD(S) in the presence of MLA Bandeppa Khashempur
Photo Credit : News Kannada

ಬೀದರ್:  ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಮನ್ನಾಎಖೇಳ್ಳಿಯ ಅನೇಕ ಜನ ಬಿಜೆಪಿ ಪಕ್ಷದ ಮುಖಂಡರು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಮಂಗಳವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಯ ಮುಖಂಡರು ಮತ್ತು ಕಾರ್ಯಕರ್ತರನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು‌.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ವಿವಿಧ ಪಕ್ಷಗಳ ಮುಖಂಡರು ನಮ್ಮ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸದ ವಿಷಯವಾಗಿದೆ. ಮಾಜಿ ಪ್ರಧಾನ ಮಂತ್ರಿಗಳು, ಪಕ್ಷದ ರಾಷ್ಟ್ರಾಧ್ಯಕ್ಷರಾದ ಹೆಚ್.ಡಿ ದೇವೇಗೌಡರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿರವರು ಮತ್ತು ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂರವರ ಮಾರ್ಗದರ್ಶನದಲ್ಲಿ ನಾವು ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾಗಿದೆ.

ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕಾಗಿದೆ. ಜೆಡಿಎಸ್ ಬೆಂಬಲಿತ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿರವರು ನಾಡಿನ ಒಳಿತಿಗಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡುವ ಕೆಲಸಗಳನ್ನು ಬೂತ್ ಮಟ್ಟದಿಂದ ಮಾಡಬೇಕು. ಜೆಡಿಎಸ್ ಪಕ್ಷದ ಪ್ರಣಾಳಿಕೆಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸ ಎಲ್ಲರೂ ಸೇರಿ ಮಾಡೋಣ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನೂತನ ಕಾರ್ಯಕರ್ತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಮಹೇಶ ಚಿಂತಾಮಣಿ, ಗಣಪತಿ ಶಂಭು, ಚನ್ನಮ್ಮಲ್ಲಪ್ಪ ಹಜ್ಜರಗಿ, ನೂತನವಾಗಿ ಸೇರ್ಪಡೆಯಾದ ಮನ್ನಾಎಖೇಳ್ಳಿಯ ವೀರಶೆಟ್ಟಿ ಮಡಿವಾಳ, ಮಲ್ಲಿಕಾರ್ಜುನ ಮಡಿವಾಳ, ಈರಪ್ಪ ಮಡಿವಾಳ, ಬಾಬುರಾವ್ ಮಡಿವಾಳ, ಸಂತೋಷ ಮಡಿವಾಳ, ಬಕ್ಕಪ್ಪ ಮಡಿವಾಳ, ನಾಗಶೆಟ್ಟಿ ಮಡಿವಾಳ, ಅನಿಲ್ ಕುಮಾರ್ ಮಡಿವಾಳ, ರಾಜಕುಮಾರ ಮಡಿವಾಳ, ಕಿರಣ್ ಮಡಿವಾಳ ಸೇರಿದಂತೆ ಅನೇಕರಿದ್ದರು.

See also  ಬೀದರ್: ಯುವಕರಿಗೆ ಸ್ವಾಮಿ ವಿವೇಕಾನಂದ ಮಾದರಿಯಾಗಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು