News Kannada
Monday, February 06 2023

ಬೀದರ್

ಬೀದರ್: ರಾಜ್ಯ ಮಟ್ಟದ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Applications invited for state-level Kittur Rani Chennamma Award
Photo Credit : News Kannada

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ ಅಡಿಯಲ್ಲಿ 2022-23ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಭಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರ ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಬೀದರ ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಅವರಿಗೆ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿ ನೀಡಲಾಗುವುದು.

ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಜನವರಿ 21 ರಿಂದ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರದಿಂದ ಅರ್ಜಿಯನ್ನು ಪಡೆದುಕೊಂಡು ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ-ಪ್ರತಿಯಲ್ಲಿ ಫೆಬ್ರುವರಿ 6 ರೊಳಗಾಗಿ ಸಲ್ಲಿಸುವಂತೆ ಬೀದರ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಗ್ರಾಮಸ್ಥರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದ ಸಚಿವ ಪ್ರಭು ಚವ್ಹಾಣ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು