ಬೀದರ್: ಕಳೆದ ಅನೇಕ ವರ್ಷಗಳಿಂದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಅನೇಕ ಜನ ಮುಖಂಡರು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಹೆಚ್.ಡಿ ಕುಮಾರಸ್ವಾಮಿರವರು ಹಾಗೂ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರ ನಿವಾಸದಲ್ಲಿ ಗುರುವಾರ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿರವರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ನೂತನವಾಗಿ ಜೆಡಿಎಸ್ ಸೇರಿದ ನಿರ್ಣಾದ ಶೈಲೇಂದ್ರ ಪೊಲೀಸ್ ಪಾಟೀಲ್, ಬೊಂಬಳಗಿಯ ಶಿವಕುಮಾರ್ ಪಾಟೀಲ್, ಮನ್ನಾಎಖೇಳ್ಳಿಯ ನಾಗಶೆಟ್ಟಿ ಹಾಸುರ್ಗುಂಡಗಿ, ಬಾವಗಿಯ ಚನ್ನಮ್ಮಲ್ಲಪ್ಪ ಹಜ್ಜರಗಿ ಸೇರಿದಂತೆ ಅನೇಕರನ್ನು ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ರವರ ಸಹೋದರರಾದ ಮಾರುತಿ ಖಾಶೆಂಪುರ್, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.