News Kannada
Saturday, March 25 2023

ಬೀದರ್

ಬೀದರ್: ಕ್ಯಾನ್ಸರ ಕುರಿತು ಅರಿವು ಮೂಡಿಸುವ ಬೃಹತ್ ಜಾಥಕ್ಕೆ ಚಾಲನೆ

Bidar: A massive jatha to create awareness about cancer has been launched.
Photo Credit : News Kannada

ಬೀದರ್: ಫೆ.04 ಶನಿವಾರದಂದು ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಇಂಡಿಯನ್ ಕ್ಯಾನ್ಸರ್ ಸುಸೈಟಿ ಕಲಬುರಗಿ ಸಹಯೋಗದೊಂದಿಗೆ ಕ್ಯಾನ್ಸರ ಕುರಿತು ಅರಿವು ಮೂಡಿಸುವ ಬೃಹತ್ ಜಾಥವನ್ನು ಬೀದರನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶಿವಶಂಕರ ಬಿ. ಅವರು ಉದ್ಘಾಟಿಸಿ ಜಾಥಕ್ಕೆ ಚಾಲನೆ ನೀಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕ್ರೆಪ್ಪಾ ಬೊಮ್ಮ ಮಾತನಾಡುತ್ತಾ, ಇತ್ತಿಚಿನ ದಿನಗಳಲ್ಲಿ ಕ್ಯಾನ್ಸರ್ ಪ್ರಮಾಣವು ಅತಿಯಾಗಿ ಹೆಚ್ಚುತ್ತಿದ್ದು ಇದಕ್ಕೆ ಮುಖ್ಯವಾಗಿ ತಂಬಾಕು ಸೇವನೆ,ಅನಾರೋಗ್ಯಕರ ಜೀವನ ಶೈಲಿ,ಅಧಿಕ ತೂಕ ಮತ್ತು ಮಧ್ಯಪಾನ ಸೇವನೆ ಆದಿ ಮುಖ್ಯ ಕಾರಣಗಳಾಗಿದ್ದು,ಜನರು ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸಬೇಕೆಂದು ತಿಳಿಸಿದರು.

ಈ ಜಾಥವು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಬೀದರನಿಂದ ಪ್ರಾರಂಭವಾಗಿ ಜನವಾಡ ರಸ್ತೆ ಮಾರ್ಗವಾಗಿ ಅಂಬೇಟ್ಕರ್ ವೃತ್ತದ ಮಾರ್ಗವಾಗಿ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಮುಕ್ತಾಯಗೊಳಿಸಲಾಯಿತು.

ಜಿಲ್ಲೆಯ ಆರಬಿಟ್ ಸಂಸ್ಥೆ ಹುಮನಾಬಾದ, ಸರಕಾರಿ ನರ್ಸಿಂಗ್ ಕಾಲೇಜ್ ಬ್ರಿಮ್ಸ್ ಬೀದರ, ಎಸ್.ಬಿ ಪಾಟೀಲ್ ದಂತ ವೈದ್ಯಕೀಯ ಸಂಸ್ಥೆ, ವಿದ್ಯಾರಣ್ಯ ಶಿಕ್ಷಣ ಸಂಸ್ಥೆ, ಸರಸ್ವತಿ ನರ್ಸಿಂಗ್ ಶಿಕ್ಷಣ ಸಂಸ್ಥೆ, ಗುರನಾನಕ ನÀರ್ಸಿಂಗ್ ಶಿಕ್ಷಣ ಸಂಸ್ಥೆ ಹಾಗೂ ಜಿಲ್ಲೆಯ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ವೀರಶೆಟ್ಟಿ ಅವರು ಸಂಚಾಲಿಸಿದರು,ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜಶೇಖರ ಪಾಟೀಲ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಕಿರಣ ಪಾಟೀಲ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯಾ ಸ್ವಾಮಿ, ಡಾ.ಸಂಗೀತಾ, ಡಾ. ವೀರೇಶ ಬಿರಾದರ, ಪ್ರಕಾಶ ವಗ್ಗೆ, ಜೋಯಲ್ ಬೋರೆ, ಪ್ರವೀಣ ಜಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

See also  ವಿಜಯನಗರ: ಪ್ರತಿಯೊಬ್ಬ ನಾಗರಿಕನು ನೀರನ್ನು ಸಂರಕ್ಷಿಸುವ ಸಂಕಲ್ಪವನ್ನು ತೆಗೆದುಕೊಳ್ಳಬೇಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು