ಬೀದರ್: ತಾಲೂಕಿನ ಹೊನ್ನಿಕೇರಿ ಗ್ರಾಮದ ಬಳಿ ಇರುವ ಮೀಸಲು ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಏಕಾಏಕಿ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ಸುಮಾರು ಎರಡು ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ಜ್ವಾಲೆ ಹರಡಿದೆ.
ಮೀಸಲು ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ಅವಘಡ
ವಿಷಯ ತಿಳಿದು ಸ್ಥಳಕ್ಕಾಗಿಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಸೋಮವಾರ ಸಂಜೆ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ ತಗಲಿತ್ತು.