News Kannada
Tuesday, June 06 2023
ಬೀದರ್

ಬೀದರ್:  ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ದರೋಡೆಕೋರರು

10 killed as amateur car race enthusiasts shot at
Photo Credit : News Kannada

ಬೀದರ್: ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್​ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್​ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ

ಇಲ್ಲಿನ ಮೈಕೂರ್​ನ ರಿಂಗ್​ರೋಡ್​ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ.

ಇಬ್ಬರು ದರೋಡೆಕೋರರು ಪೊಲೀಸರ ಮೇಲೇ ಹಲ್ಲೆ ಮಾಡಲು ಬಂದಾಗ ಬೀದರ್​ ರೂರಲ್ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದರು. ಬಳಿಕ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪಿಎಸ್‌ಐ ನಾಗೇಂದ್ರ ಮತ್ತು ಸಿಬ್ಬಂದಿ ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

See also  ಬೆಂಗಳೂರು: ಮರಾಠ ಸಮಾಜಕ್ಕೆ ರಾಜ್ಯ ಸರಕಾರ ಜಮೀನು ಮಂಜೂರು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು