ಬೀದರ್: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ. ಪುಷ್ಪ ಅಮರನಾಥ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಜಾಶಕ್ತಿಗೆ ನೇಮಕ
ಕರ್ನಾಟಕ ಪ್ರಜಾಶಕ್ತಿ ಸಂಘಟನೆಯ ಬೀದರ್ ದಕ್ಷಿಣ ಘಟಕದ ಗೌರವಾಧ್ಯಕ್ಷರಾಗಿ ರಮೇಶ ಜಿ.ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.