News Karnataka Kannada
Friday, April 19 2024
Cricket
ಬೀದರ್

ಬೀದರ್: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಶೈಲೇಂದ್ರ ಬೆಲ್ದಾಳೆ

Taking oath in the name of God, Dr. Shailendra Beldale
Photo Credit : News Kannada

ಬೀದರ್: ಬೆಂಗಳೂರು ನಲ್ಲಿ 16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದ್ದರು.

ಬೀದರ್ ದಕ್ಷಿಣ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಧಾನಸಭೆಗೆ ಪ್ರವೇಶಿಸುವ ಮುನ್ನ ದ್ವಾರಕ್ಕೆ ನಮಸ್ಕರಿಸಿ ಸಭೆಯಲ್ಲಿ ಭಾಗವಹಿಸಿದ್ದರು.

ಬಳಿಕ ನೂತನ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ದೇವರ ಹೆಸರಲ್ಲಿ, ಮನೆದೇವರು ಕೇತಕಿ ಸಂಗಮೇಶ್ವರ ಹೆಸರಿನಲ್ಲಿ, ತಂದೆ ತಾಯಿ ಮತ್ತು ಕ್ಷೇತ್ರದ ಮತದಾರರ ಹೆಸರಿನಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮೊದಲಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಮೊದಲ ಬಾರಿಗೆ ವಿಧಾನಸಭೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ ಬೀದರ್ ದಕ್ಷಿಣ ಕ್ಷೇತ್ರದ ಮತದಾರರಿಗೆ, ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದು ಕ್ಷೇತ್ರ ಅಭಿವೃದ್ಧಿ ಪಡಿಸುವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು