News Kannada
Friday, June 09 2023
ಬೀದರ್

ಬೀದರ: ಹೊಸ ಸರ್ಕಾರದ ಮುಂದೆ ಹಳೆ ಸವಾಲು,ಕೈ ಆಡಳಿತದಲ್ಲಿ ನಿರೀಕ್ಷೆ ಈಡೇರಲಿ

The old challenge before the new government, let the expectations be fulfilled in the hand-to-hand administration
Photo Credit : News Kannada

ಬೀದರ: “ಗ್ಯಾರಂಟಿ’ ಯೋಜನೆಗಳ ಭರವಸೆಗಳನ್ನು ಹೊತ್ತು ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಪರ್ವ ಶುರುವಾಗಿದ್ದು, ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮರ ಸಾರಥ್ಯ ವಹಿಸಿದ್ದಾರೆ. ಶಾಶ್ವತ ನೀರಾವರಿ ಮತ್ತು ಕೈಗಾರಿಕೆಗಳ ಸ್ಥಾಪನೆಯಂಥ ಹಳೆ ಕನಸುಗಳ ಜತೆಗೆ ಅಭಿವೃದ್ಧಿಯ ಹೊಸ ನಿರೀಕ್ಷೆಗಳನ್ನು ನೂತನ ಸರ್ಕಾರ ಈಡೇರಿಸಲಿ ಎಂಬುದು ಧರಿನಾಡು ಬೀದರ ಜನರ ಆಶಯ.

ಹಿಂದಿನ ಐದು ವರ್ಷದ ಬಿಜೆಪಿ ಸರ್ಕಾರ ಆಡಳಿತ ಅವಧಿಯಲ್ಲಿ ಗಡಿ ಜಿಲ್ಲೆ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಕೆಲವು ಯೋಜನೆಗಳು ಅನುಷ್ಠಾನಕ್ಕೆ ಬಂದಿದ್ದರೆ, ಇನ್ನುಳಿದವುಗಳು ಕೇವಲ ಶಂಕುಸ್ಥಾಪನೆ, ಸರ್ಕಾರದ ಕಡತಗಳಿಗೆ ಮಾತ್ರ ಸೀಮಿತವಾದವು. ಹಾಗಾಗಿ ಕಾಂಗ್ರೆಸ್‌ ಆಡಳಿತದಲ್ಲಿ ಹೊಸ ಮೈತ್ರಿ ಸರ್ಕಾರ ಹಳೆ ಭರವಸೆಗಳ ಜತೆಗೆ ಅಭಿವೃದ್ಧಿಯ ಹೊಸ ಯೋಜನೆಗಳನ್ನು ಜಾರಿಗೆ ತರಲಿ ಎಂಬುದು ಜನರ ನಿರೀಕ್ಷೆಯಾಗಿದೆ. ಮುಖ್ಯವಾಗಿ ಕೈಗೆ ಉದ್ಯೋಗ ಸೃಷ್ಟಿಸುವಂಥ ಕೈಗಾರಿಕೆಗಳ ಸ್ಥಾಪನೆ, ಪ್ರವಾಸೋದ್ಯಮ ಅಭಿವೃದ್ಧಿ, ಶೈಕ್ಷಣಿಕ ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ಸಿಗಬೇಕಿದೆ.

ಮುಖ್ಯವಾಗಿ ನೀರಾವರಿ ಯೋಜನೆಗಳಿಗೆ ಆದ್ಯತೆ ಸಿಗಬೇಕಿದೆ. ಗೋದಾವರಿ ಬೇಸ್‌ನಿಂದ ಬೇಡಿಕೆಯಂತೆ ನೀರಿನ ಸದ್ಬಳಕೆಗೆ ಅಗತ್ಯ ಬ್ಯಾರೇಜ್‌ ಗಳನ್ನು ನಿರ್ಮಿಸುವುದು ಮತ್ತು ಕೆರೆಗಳನ್ನು ತುಂಬಿಸಿ ನೀರಾವರಿ ಪ್ರದೇಶವನ್ನು ಹೆಚ್ಚಿಸಬೇಕಿದೆ. ಇನ್ನೂ ಅಪೂರ್ಣ ಸ್ಥಿತಿಯಲ್ಲಿರುವ ಕಾರಂಜಾ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಬೇಕು ಮತ್ತು ಕಾಲುವೆಗಳ ಆಧುನೀಕರಣಕ್ಕೆ ಕ್ರಮ ಕೈಗೊಳ್ಳಬೇಕಿದೆ. ಹಲವು ವರ್ಷಗಳ ಬೇಡಿಕೆಯಾಗಿರುವ ಕೃಷಿ ಕಾಲೇಜು ಸ್ಥಾಪನೆಗೆ ಹೆಜ್ಜೆ ಇಡಬೇಕಿದೆ.

ಜಿಲ್ಲೆಯ ರೈತರ ಜೀವನಾಡಿ ಆಗಿರುವ ಬಿಎಸ್‌ ಎಸ್‌ಕೆ ಕಾರ್ಖಾನೆ ಸಾಲದ ಹೊರೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬೀಗ ಹಾಕಲಾಗಿದ್ದು, ಕಾರ್ಮಿಕರು ಕೆಲಸ-ವೇತನ ಇಲ್ಲದೇ ಬೀದಿಗೆ ಬಿದ್ದಿದ್ದರೆ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ. ಹೊಸ ಸರ್ಕಾರ ನೀಡಿರುವ ಭರವಸೆಯಂತೆ ಬಿಎಸ್‌ಎಸ್‌ಕೆ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಪ್ಯಾಕೇಜ್‌ ಘೋಷಿಸಬೇಕಿದೆ.

ಜತೆಗೆ ಕಾರಂಜಾ ಯೋಜನೆಯಡಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ವೈಜ್ಞಾನಿಕ ಪರಿಹಾರ ಕಲ್ಪಿಸಿ ವರ್ಷದಿಂದ ನಡೆಸುತ್ತಿರುವ ಧರಣಿಗೆ ನ್ಯಾಯ ಒದಗಿಸಬೇಕಿದೆ. ಆಂಧ್ರ, ಮಹಾರಾಷ್ಟ್ರಕ್ಕೆ ಗಡಿಗೆ ಅಂಟಿಕೊಂಡಿದ್ದರೂ ಜಿಲ್ಲೆಯಲ್ಲಿ ಕೈಗಾರಿಕೆಗಳೇ ಇಲ್ಲ. ಹಾಗಾಗಿ ಇಲ್ಲಿನ ಯುವ ಜನಾಂಗ ಉದ್ಯೋಗಕ್ಕಾಗಿ ಮಹಾನಗರಗಳತ್ತ ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸಲು ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕಿದೆ. ಸ್ಮಾರಕಗಳು, ಕೋಟೆ-

ಕೊತ್ತಲಗಳನ್ನು ಹೊಂದಿರುವ ಜಿಲ್ಲೆ ಪ್ರವಾಸೋದ್ಯಮ ಬೆಳವಣಿಗೆಯಾಗಿ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆ. ಆದರೆ, ಇದಕ್ಕೆ ಪೂರಕವಾಗಿ ಬೀದರನಲ್ಲಿ ಗೈಡ್‌ಗಳ ವ್ಯವಸ್ಥೆ ಇಲ್ಲ.

ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಒದಗಿಸಿ, ಅಧಿಕಾರಿಗಳ ನೇಮಕ ಮಾಡಬೇಕು. ಐದು ತಾಲೂಕು ಗಳಲ್ಲಿ ಮಿನಿ ವಿಧಾನಸೌಧ ಹೊಂದಿದ್ದು, ಜಿಲ್ಲಾ ಕೇಂದ್ರ ಬೀದರನಲ್ಲಿ ಈವರೆಗೆ ಜಿಲ್ಲಾ ಕಚೇರಿಗಳ ಸಂಕೀರ್ಣವೂ ಇಲ್ಲ. ಜಿಲ್ಲಾಧಿ ಕಾರಿ ಕಚೇರಿಯನ್ನೇ ಸಂಕೀರ್ಣವನ್ನಾಗಿ ಪುನರ್‌ ನಿರ್ಮಾಣಕ್ಕೆ ಈಗ ನಿರ್ಧರಿಸಿ ಹಲವು ದಿನಗಳು ಕಳೆದರೂ ಚುನಾಯಿತ ಪ್ರತಿನಿಧಿಗಳ ಒಣ ಪ್ರತಿಷ್ಠೆಯಿಂದ ನನೆಗುದಿಗೆ ಬಿದ್ದಿದೆ. ಹೊಸ ಸರ್ಕಾರ ಇತ್ತ ಗಮನ ಹರಿಸಬೇಕಿದೆ.

See also  ನವದೆಹಲಿ: ಯುವತಿಗೆ ಚಾಕುವಿನಿಂದ ಇರಿದ ಪ್ರಿಯಕರ

ಬಸವಕಲ್ಯಾಣದಲ್ಲಿ 600 ಕೋಟಿ ರೂ. ವೆಚ್ಚದ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ನಿಗದಿತ ಅವ ಧಿಯೊಳಗೆ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ಬಜೆಟ್‌ ನಲ್ಲಿ ಪೂರಕ ಅನುದಾನ ಮೀಸಲಿಡಬೇಕಿದೆ. ಜತೆಗೆ ಬಸವಾದಿ ಶರಣರ ಸ್ಮಾರಕಗಳ ಅಭಿವೃದ್ಧಿಗೆ ಸರ್ಕಾರ ರಚಿಸಿರುವ ಬಿಕೆಡಿಬಿಗೆ ಪೂರಕ ಅನುದಾನ ಸಿಗದ ಕಾರಣ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದು, ಅಗತ್ಯ ಹಣ ಬಿಡುಗಡೆ ಮಾಡಿ ಕೆಲಸ ಚುರುಕುಗೊಳಿಸಬೇಕು ಮತ್ತು ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು