ಬೀದರ್: ಮಹಾರಾಷ್ಟ್ರ ಸರ್ಕಾರಿ ಬಸ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ನಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ಡಿಸಿ ಮೊಹಮ್ಮದ್ ಇಸ್ಮಾಯಿಲ್ ಇನಾಮದಾರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಬೀದರ್ ತಾಲೂಕಿನ ಬಂಗೂರು ಚೆಕ್ಪೋಸ್ಟ್ನಲ್ಲಿ ಗಾಂಜಾ ವಶಕ್ಕೆ ಪಡೆದಿದ್ದಾರೆ.