News Karnataka Kannada
Tuesday, April 23 2024
Cricket
ಬೀದರ್

ಬೀದರ್: ಲಿಂಗಾಯತರ ಸೋಲಿಸಲು ಒಗ್ಗೂಡಿ ಎಂದಿಲ್ಲ- ಶಾಸಕ ರಹೀಂಖಾನ್

We have not come together to defeat Lingayats: Mla Rahim Khan
Photo Credit : News Kannada

ಬೀದರ್: ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತರನ್ನು ಸೋಲಿಸಲು ಮುಸ್ಲಿಮರು ಒಗ್ಗೂಡಿ ಎಂದು ಎಲ್ಲೂ ಹೇಳಿಲ್ಲ ಎಂದು ಬೀದರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ರಹೀಂಖಾನ್ ಹೇಳಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಅವರು ಸೋಲುವ ಭೀತಿಯಿಂದ ಹತಾಶರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ನಾನೊಬ್ಬ ಅಲ್ಪಸಂಖ್ಯಾತರ ಅಭ್ಯರ್ಥಿಯಾಗಿದ್ದೇನೆ. ಎಲ್ಲರೂ ಸೇರಿ ನನ್ನನ್ನು ಗೆಲ್ಲಿಸಿ ಎಂದು ಕೋರಿದ್ದೇನೆಯೇ ಹೊರತು ಲಿಂಗಾಯತರನ್ನು ಸೋಲಿಸಲು ಒಂದಾಗಿ ಎಂದು ಕರೆ ಕೊಟ್ಟಿಲ್ಲ. ವೇದಿಕೆಯಲ್ಲಿದ್ದ ಮುಖಂಡರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಹೇಳಿದ್ದಾರೆ.

ನಾನು ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ವ್ಯಕ್ತಿತ್ವ ಏನೆಂಬುದು ಕ್ಷೇತ್ರದ ಮತದಾರರಿಗೆ ಚೆನ್ನಾಗಿ ಗೊತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹುಸಿ ಸುದ್ದಿ ಹರಿಯ ಬಿಡುತ್ತಿರುವವರ ವಿರುದ್ಧ ಕ್ರಮಕ್ಕಾಗಿ ದೂರು ಸಲ್ಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಲಿಂಗಾಯತರು ಹಿಂದಿನಿಂದಲೂ ನನಗೆ ಬೆಂಬಲಿಸುತ್ತ ಬಂದಿದ್ದಾರೆ. ಈ ಬಾರಿಯೂ ಬೆಂಬಲಿಸಲಿದ್ದಾರೆ ಎನ್ನುವ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು