News Kannada
Saturday, February 24 2024
ಬೀದರ್

ನೀರಾವರಿ ಯೋಜನೆಗಳಿಗೆ ಅನುದಾನ: ಖೂಬಾ ಒತ್ತಾಯ

Khooba demands funds for irrigation projects
Photo Credit : News Kannada

ಬೀದರ್: ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಲಾದ 4 ನೀರಾವರಿ ಯೋಜನೆಗಳಿಗೆ ಅನುದಾನ ಕಲ್ಪಿಸಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಜಲ ಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿ, ₹ 762 ಕೋಟಿ ವೆಚ್ಚದ ಭಾಲ್ಕಿ ತಾಲ್ಲೂಕಿನ ಮೆಹಕರ್ ಏತ ನೀರಾವರಿ ಯೋಜನೆ, ₹ 560.70 ಕೋಟಿ ವೆಚ್ಚದ ಔರಾದ್ ತಾಲ್ಲೂಕಿನ ಹಾಲಹಳ್ಳಿ ಬ್ಯಾರೇಜ್ ಮೇಲ್ಭಾಗದಲ್ಲಿ ಮಾಂಜ್ರಾ ನದಿಯಿಂದ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ₹ 49.50 ಕೋಟಿ ವೆಚ್ಚದ ಭೋರಿ ನದಿಯಿಂದ ಆಳಂದ ತಾಲ್ಲೂಕಿನ 8 ಕೆರೆಗಳಿಗೆ ಪೈಪ್‍ಲೈನ್ ಮೂಲಕ ನೀರು ತುಂಬಿಸುವ ಯೋಜನೆ, ₹ 204 ಕೋಟಿ ವೆಚ್ಚದ ಚಿಂಚೋಳಿ ತಾಲ್ಲೂಕಿನ ಐನಾಪುರ ಏತ ನೀರಾವರಿ ಯೋಜನೆಗಳ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲು ಹಿಂದಿನ ಸರ್ಕಾರದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಗಮನ ಸೆಳೆದರು.

ಜನ ಹಾಗೂ ಜಾನುವಾರುಗಳ ಹಿತದಿಂದ ಯೋಜನೆಗೆ ಮಂಜೂರಾತಿ ಕೊಡಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ಮನವಿಗೆ ಸ್ಪಂದಿಸಿ ಶಿವಕುಮಾರ ಅವರು ನಾಲ್ಕೂ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಲು ಅಧಿಕಾರಿಗಳಿಗೆ ಸೂಚನೆಯನ್ನೂ ಕೊಟ್ಟಿದ್ದಾರೆ ಎಂದು ಖೂಬಾ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು