News Kannada
Friday, December 09 2022

ಮಹಾರಾಷ್ಟ್ರ

ಸಾರಿಗೆ ಬಸ್ ಗೆ ಕಪ್ಪು ಮಸಿ ಬಳಿದು ಎಂಇಎಸ್ ಕಾರ್ಯಕರ್ತರ ಪುಂಡಾಟ

Photo Credit :

ಮುಂಬೈ : ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಪುಂಡಾಟ ಮುಂದುವರೆದಿದೆ. ಸಾರಿಗೆ ಬಸ್ ಗಳನ್ನು ತಡೆದು ಕಪ್ಪು ಮಸಿ ಬಳಿದು, ಚಾಲಕನಿಗೂ ಹಿಂಸೆ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮುಂಬೈನಿಂದ ಕಲಬುರ್ಗಿಗೆ ಆಗಮಿಸುತ್ತಿದ್ದ ಸಾರಿಗೆ ಬಸ್ ನ್ನು ತಡೆದ ಎಂಇಎಸ್ ಪುಂಡರು, ಬಸ್ ಮೇಲೆ ಕಪ್ಪು ಮಸಿ ಬಳಿದು ಜೈ ಶಿವಾಜಿ ಎಂದು ಬರೆದಿದ್ದಾರೆ. ಅಲ್ಲದೇ ಬಸ್ ಚಾಲಕನ ಕೈಯಲ್ಲಿ ಬಲವಂತವಾಗಿ ಎಂಇಎಸ್ ಬಾವುಟ ಕೊಟ್ಟು, ಜೈ ಶಿವಾಜಿ ಎಂದು ಘೋಷಣೆ ಕೂಗಿಸಿದ್ದಾರೆ.

ಇನ್ನೊಂದೆಡೆ ಶಿವಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಸರ್ವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ್ ಮನೆಗೆ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ತೆರಳಿದ ಶಿವಸೇನೆ ಪುಂಡರು, ಶಿವಕುಮಾರ್ ಅವರ ಕೊರಳುಪಟ್ಟಿ ಹಿಡಿದು ಥಳಿಸಿದ್ದಾರೆ. ಅಲ್ಲದೇ ಮರಾಠಿಯಲ್ಲಿ ನಿಂದಿಸುತ್ತಾ, ಕ್ಷಮೆ ಯಾಚಿಸುವಂತೆ ಹೇಳಿದ್ದಾರೆ.

ಮನೆಗೆ ನುಗ್ಗಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ದೃಶ್ಯವನ್ನು ಶಿವಸೇನೆ ಕಾರ್ಯಕರ್ತರೇ ವಿಡಿಯೋ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

See also  ಮಹಾರಾಷ್ಟ್ರ ಬಸ್ ಮುಷ್ಕರ: ಎಂಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿದಿದ್ದು, ಜನಜೀವನ ಅಸ್ತವ್ಯಸ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು