ಕಲಬುರ್ಗಿ: ಭಾರೀ ಮಳೆಗೆ ಒಂದರ ಹಿಂದೆ ಒಂದರಂತೆ ಅವಘಡಗಳು ಸಂಭವಿಸುತಿದ್ದು ಕಲಬುರ್ಗಿಯಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವೃದ್ಧೆಯೋರ್ವರು ಸಾವನ್ನಪ್ಪಿದ್ದಾರೆ.
ಈ ದುರ್ಘಟನೆ ಕಲಬುರ್ಗಿಯ ಚಿತ್ತಾಪುರ ಪಟ್ಟಣದಲ್ಲಿ ಸಂಭವಿಸಿದೆ. ಆರೀಫಾ ಬೇಗಂ (60) ಮೃತ ಮಹಿಳೆ. ತಡರಾತ್ರಿ ಕಲಬುರ್ಗಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ರಾತ್ರಿ ಮಲಗಿದ್ದ ವೃದ್ಧೆಯ ಮೇಲೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ.
ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರೀಫಾ ಬೇಗಂ ಮೃತಪಟ್ಟಿದ್ದಾರೆ.
ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.