ಕಲಬುರಗಿ: ಸಾರ್ವಜನಿಕ ಭಾಷಣ ಮಾಡುವಾಗ ಕಲಬುರಗಿ ಜಿಲ್ಲೆಯ ಬಿಜೆಪಿ ಮುಖಂಡರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಕಲಬುರಗಿ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರು ದಾಖಲಿಸಿದೆ.
ನ.16ರ ಬುಧವಾರ ಸಂಜೆ ಪಕ್ಷದ ಕಾರ್ಯಕರ್ತರೊಂದಿಗೆ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಠಾಣಾಧಿಕಾರಿಗೆ ದೂರು ಸಲ್ಲಿಸಿದರು.
ನವೆಂಬರ್ 10 ರಂದು ವಾಡಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ದ್ವೇಷದ ಭಾಷಣ ಮಾಡಿದ್ದ ಖರ್ಗೆ, ಮನಸ್ಸು ಮಾಡಿದರೆ ಕಲಬುರಗಿ ಜಿಲ್ಲೆಯ ಬಿಜೆಪಿ ನಾಯಕರನ್ನು ಹೊರಗೆ ಹೋಗಲು ಬಿಡುವುದಿಲ್ಲ ಎಂದು ಹೇಳಿ ಕೊಲೆ ಬೆದರಿಕೆ ಹಾಕಿದ್ದರು.
ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.