ಹುಮನಾಬಾದ್: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ 60ನೇ ಜನ್ಮ ದಿನವನ್ನು ವಿವಿಧ ಕಾರ್ಯಕ್ರಮಗಳ ಮೂಲ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಕೋವಿಡ್ ಅವಧಿಯಲ್ಲಿ ಸಾರ್ವಜನಿಕರು ಸಂಕಷ್ಟದಲ್ಲಿದ್ದ ಕಾರಣ ಜನ್ಮದಿನ ದಿನ ಆಚರಿಸಿಕೊಂಡಿರಲಿಲ್ಲ. ಅವರ ಅಭಿಮಾನಿಗಳು ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಜನ್ಮದಿನ ಆಚರಿಸಿ ಶುಭ ಹಾರೈಸಲು ತೀರ್ಮಾನಿಸಿದ್ದಾರೆ.
ಈಶ್ವರ ಖಂಡ್ರೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಭಾಲ್ಕಿಯ ಖಂಡ್ರೆ ಅವರ ಗೃಹ ಕಚೇರಿ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.