ಕಲಬುರಗಿ : ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಮಂಗಳವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳಿಂದ 27 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.
34-ಅಫಜಲಪುರ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಕಾಜಪ್ಪ ಯಂಶವಂತರಾವ್ 2 ನಾಮಪತ್ರ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಶಾಮರಾಯ ಬಕ್ಸರ್-1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ನಿತೀನ ತಂದೆ ವೆಂಕಯ್ಯ ಗುತ್ತೇದಾರ್-1 ನಾಮಪತ್ರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕಲ್ಲಪ್ಪ ಗುರಪ್ಪ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಪವಾಡಬಸಪ್ಪಾ ಶರಣಪ್ಪ, ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಭೀಮರಾಯ ದೇವೀಂದ್ರ ಹಾಗೂ ಭಾರತ ಕಮ್ಯುನಿಸ್ಟ್ ಪಾರ್ಟಿಯ ಅಭ್ಯರ್ಥಿಯಾಗಿ ಮಹೇಶಕುಮಾರ್ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಎಸ್.ಹೆಚ್., ಜನತಾದಳ (ಜಾತ್ಯಾತೀತ) ಪಕ್ಷದಅಭ್ಯರ್ಥಿಯಾಗಿ ಸುಭಾಶ್ಚಂದ್ರ ರಾಠೋಡ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜಗದೀಶ ಸಾಗರ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
41-ಸೇಡಂ ವಿಧಾನಸಭಾ ಕ್ಷೇತ್ರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ ಚಂದ್ರಶೆಟ್ಟಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಲಲ್ಲೇಶ ರೆಡ್ಡಿ @ ಜಿ. ಲಲನಾಥ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕಟಸಾನಿ ದಿದೀಪ್ಯಾರಾಣಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಸಂಜೀವನ್ ಯಾಕಾಪುರ ಅವರು 2 ನಾಮಪತ್ರ ಸಲ್ಲಿಸಿದ್ದಾರೆ.43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರೇವುನಾಯಕ ಬೆಳಮಗಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ವೆಂಕಟೇಶ ಮಹಾರಾಜ, ಪಕ್ಷೇತರ ಅಭ್ಯರ್ಥಿಯಾಗಿ ರಮೇಶ ಭೀಮಸಿಂಗ್ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಮತ್ತಿಮೂಡ ಅವರು ತಲಾನಾಮಪತ್ರ ಸಲ್ಲಿಸಿದ್ದಾರೆ.
44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಶರಣಬಸಪ್ಪ ಪಪ್ಪಾ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಿದ್ದರಾಮ ಪಾಟೀಲ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಚೀನ ಕೊಗನೂರ ಹಾಗೂ ಇಂಡಿಯನ್ ಮೂಮೆಂಟ್ ಪಾರ್ಟಿಯ ಅಭ್ಯರ್ಥಿಯಾಗಿ ಮಹ್ಮದ್ ಅಸ್ಲಂ ಮನಿಯಾರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಭೀಮಾಶಂಕರ ಮಾಲಿಪಾಟೀಲ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತ ಬಿ. ಪಾಟೀಲ (ಚಂದು ಪಾಟೀಲ) ಅವರು 1 ನಾಮಪತ್ರ ಸಲ್ಲಿಸಿದ್ದಾರೆ.46-ಆಳಂದ ವಿಧಾನಸಭಾ ಕ್ಷೇತ್ರ: ಭಾರತೀಯ ಬಹುಜನ ಕ್ರಾಂತಿ ದಳ ಪಕ್ಷದ ಅಭ್ಯರ್ಥಿಯಾಗಿ ಚವ್ಹಾಣ ರಾಜು ಅವರು 1 ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆಯ ಆರಂಭ ದಿನದಿಂದಇಲ್ಲಿಯವರೆಗೆ ಒಟ್ಟಾರೆ 65 ಅಭ್ಯರ್ಥಿಗಳಿಂದ 78 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.