ಕಲಬುರಗಿ: ಕಲಬುರಗಿ ಬಾಲಕರ ತಂಡಗಳು, 14 ಮತ್ತು 17 ವರ್ಷದೊಳಗಿನವರ ವಿಭಾಗ ಮಟ್ಟದ ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿವೆ.
ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಭಾನುವಾರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ವಿಭಾಗ ಮಟ್ಟದ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕಲಬುರಗಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಳ್ಳಾರಿ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಬಳ್ಳಾರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಕಲಬುರಗಿ ತಂಡ ದ್ವಿತೀಯ ಸ್ಥಾನ ಗಳಿಸಿತು.
17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕಲಬುರಗಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಳ್ಳಾರಿ ತಂಡ ದ್ವಿತೀಯ ಸ್ಥಾನ ಗಳಿಸಿತು.
17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಬಳ್ಳಾರಿ ತಂಡ ಪ್ರಥಮ ಸ್ಥಾನ ಗಳಿಸಿದರೆ, ಕಲಬುರಗಿ ದ್ವಿತೀಯ ಸ್ಥಾನ ಗಳಿಸಿತು.
ಪಂದ್ಯಾವಳಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಕ್ರೀಡಾಳುಗಳು ಪಾಲ್ಗೊಂಡಿದ್ದರು. ತೀರ್ಪುಗಾರರಾಗಿ ಶಂಕರ ಸೂರೆ, ವಿಜಯಕುಮಾರ ಶಿಂದಗಿ, ಮಹೇಶಪವಾರ, ದೇವರಾಜ, ಜಗದೀಶ, ಪ್ರವೀಣ ಪುಣೆ ಪಾಲ್ಗೊಂಡಿದ್ದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಭಾಗೀಯ ನಿರ್ದೇಶಕ ವಸಂತಕುಮಾರ ಭಂಡಾರಿ ಪಂದ್ಯಾವಳಿಗೆ ಚಾಲನೆ ನೀಡಿದರು. ಶಿಕ್ಷಣಾಧಿಕಾರಿ ಶಿವಗೊಂಡಪ್ಪ ಕಣ್ಣಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಂ.ಜಿ. ಬಿರಾದಾರ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಾಜಶೇಖರ ಗೋನಾಯಕ, ಅಶೋಕ, ಉಮೇಶ ಶರ್ಮಾ, ಬಸವರಾಜ, ಅಂಬರೀಶ, ಸುರೇಶ, ದಶರಥ, ಸಂತೋಷ ಬಾವಿಮನಿ, ವಿಷ್ಣುವರ್ಧನ, ಚಿದಾನಂದ ಇದ್ದರು.