News Kannada
Friday, December 09 2022

ಕೊಪ್ಪಳ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

Photo Credit :

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿಗಳ ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಶಂಕರ ಎಂ. ಜಾಲವಾದಿ ಅವರು ತೀರ್ಪು ಪ್ರಕಟಿಸಿದ್ದಾರೆ.

ದಂಡದ ಮೊತ್ತದಲ್ಲಿ ರೂ.10 ಸಾವಿರಗಳನ್ನು ಬಾಧಿತಳಿಗೆ ಪರಿಹಾರ ರೂಪದಲ್ಲಿ ವಿತರಿಸಲು ನ್ಯಾಯಾಧೀಶರು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಕೊಪ್ಪಳದ ಬಸವರಾಜ ಸತ್ಯಪ್ಪ ದೊಡ್ಡಮನಿ ಎಂಬ ವ್ಯಕ್ತಿಯು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿ, ಬೇರೆ ಊರಿಗೆ ಕರೆದೊಯ್ದು ಗೃಹ ಬಂಧನದಲ್ಲಿಟ್ಟು ಅತ್ಯಾಚಾರ ಮಾಡಿದ ಆರೋಪವು ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಠಾಣೆ ಪಿ.ಐ ಮೌನೇಶ್ವರ ಮಾಲಿಪಾಟೀಲ್ ಅವರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.20 ಸಾವಿರಗಳ ದಂಡವನ್ನು ವಿಧಿಸಲಾಗಿದೆ.

See also  3 ಕಿ.ಮೀ ದೂರ ವೀಲ್ ಚೇರ್ ನಲ್ಲಿ ಬಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ವಿಶೇಷಚೇತನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು