ಕೊಪ್ಪಳ: ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು, ಹನುಮೇಶ ಭೋವಿ, ಹನುಮೇಶ ಆಗೋಲಿ, ವೆಂಕಟೇಶ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಗಾಯಗೊಂಡಿರುವ ಹನುಮೇಶ ಬೋವಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಎಲ್ಲಪ್ಪ ಓಬಳಬಂಡಿ, ಬಸವರಾಜ ಓಬಳಬಂಡಿ ಅವರ ವಿರುದ್ಧ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಮೂವರು ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.