News Kannada
Sunday, February 05 2023

ಕೊಪ್ಪಳ

ಕೊಪ್ಪಳ: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ- ಸಿಎಂ ಬೊಮ್ಮಾಯಿ

Hubballi: Congress is the gateway to enter politics with bad culture: CM Bommai
Photo Credit : G Mohan

ಕೊಪ್ಪಳ, ಡಿ.15: ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಅವರು ಇಂದು ಕೊಪ್ಪಳದ ಗಿಣಿಗೇರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಿನ್ನಾಭಿಪ್ರಾಯ ಶುದ್ಧ ಸುಳ್ಳು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು.

ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.

ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

See also  ಕೊಪ್ಪಳ: ಆಂಜನೇಯ ಬೆಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಶಿಕಲಾ ಜೊಲ್ಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು