News Kannada
Monday, February 26 2024
ಕೊಪ್ಪಳ

ಕೊಪ್ಪಳ: ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ ಎಂದ ಬಿ.ವೈ.ವಿಜಯೇಂದ್ರ

BJP candidate B.Y. Vijendra campaigns in constituency
Photo Credit : Twitter

ಕೊಪ್ಪಳ: ನನ್ನ ರಾಜಕೀಯ ನಡೆ ಕುರಿತಾಗಿ ಹೈಕಮಾಂಡ್ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಜನರು ಬಯಸಿದಲ್ಲಿ ಹಾಗೂ ಪಕ್ಷ ಟಿಕೆಟ್ ನೀಡಿದಲ್ಲಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ‌. ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವೇ ನನ್ನ ಕ್ಷೇತ್ರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಅಭಿನವ ಬಸವಣ್ಣ ಎಂದು ಖ್ಯಾತರಾದ ಗವಿಶ್ರೀಗಳ ದರ್ಶನ ಪಡೆಯಲು ಕೊಪ್ಪಳಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶಿಕಾರಿಪುರದೊಂದಿಗೆ ನಮ್ಮ ತಂದೆ ಅವಿನಾಭಾವ ಸಂಬಂಧ ಹೊಂದಿದ್ದಾರೆ.

ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತರಾದವರನ್ನು ಆಯ್ಕೆ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ಯಡಿಯೂರಪ್ಪ ನಲವತ್ತು ವರ್ಷ ಪಕ್ಷಕ್ಕಾಗಿ ದುಡಿದಿದ್ದಾರೆ.

ಪಕ್ಷವೂ ಅವರಿಗೆ ಎಲ್ಲಾ ರೀತಿಯ ಸ್ಥಾನಮಾನ ನೀಡಿದೆ. ಕ್ಷೇತ್ರದ ಜನರ ಅಭಿಪ್ರಾಯದಂತೆ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾಗಿ ಹೇಳಿದ್ದಾರೆ ಎಂದರು.

ಗವಿಶ್ರೀಗಳ ಸನ್ನಿಧಾನದ ಕುರಿತಾಗಿ ಮಾತನಾಡಿದ ಅವರು, ಇಲ್ಲಿ ಬಂದರೆ ಬದುಕಿಗೆ ಸ್ಪೂರ್ತಿ ಸಿಗುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು