News Karnataka Kannada
Friday, April 26 2024
ರಾಯಚೂರು

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ

ಮಂಗಳೂರು
Photo Credit : News Kannada

ರಾಯಚೂರು: ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ ಅನಾರೋಗ್ಯ ಪೀಡಿತರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ರಿಮ್ಸ್‌ ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಸ್ವಚ್ಛ ನೀರು ನೀಡಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ.

ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಜೂನ್ 2022 ರಲ್ಲಿ, ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿ ಮೂರು ಜನರು ಸಾವನ್ನಪ್ಪಿದರು ಮತ್ತು 23 ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು