ರಾಯಚೂರು: ಬಹುಭಾಷಾ ಸಿನಿಮಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ (67) ಗುರುವಾರ ನಿಧನರಾದರು. ರಾಯಚೂರು ನಗರದ ಕೆ.ಎಂ.ಕಾಲನಿಯಲ್ಲಿ ವಾಸವಿದ್ದ ಚಲಪತಿ ಚೌದ್ರಿ ಅವರನ್ನು ಅನಾರೋಗ್ಯ ಹಿನ್ನೆಲೆ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಕನ್ನಡ, ತೆಲುಗು, ಹಿಂದಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಚಲಪತಿ ಬಣ್ಣ ಹಚ್ಚಿದ್ದರು. ಶಿವರಾಜ್ ಕುಮಾರ್, ಚಿರಂಜೀವಿ, ನಾಗಾರ್ಜುನ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ಅಭಿನಯಿಸಿದ್ದರು.
ಚೌದ್ರಿ ಅಗಲಿಕೆಗೆ ಸಿನಿಮಾ ರಂಗ ಸಂತಾಪ ಸೂಚಿಸಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳು ಇದ್ದಾರೆ. ಸ್ವಗೃಹದಲ್ಲಿ ಅಂತಿಮದರ್ಶಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಗರದ ಬಿಆರ್ಬಿ ಕಾಲೇಜು ಸಮೀಪದ ಮುಕ್ತಿಧಾಮದಲ್ಲಿ ಇಂದು ಸಂಜೆ 4:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.