News Kannada
Saturday, February 24 2024
ಯಾದಗಿರಿ

ಕೊಡೇಕಲ್‌ ಬಸವಣ್ಣ ಭವಿಷ್ಯ: ಆಂತರಿಕ ಕಚ್ಚಾಟದಿಂದ ಮುಖ್ಯಮಂತ್ರಿ ಅಧಿಕಾರ ತ್ಯಾಗದ ಎಚ್ಚರಿಕೆ

Kodekal Basavanna's future: CM warns of quitting due to infighting
Photo Credit : News Kannada

ಯಾದಗಿರಿ: ಯಾದಗಿರಿ ಜಿಲ್ಲೆಯ ಕಾಲಜ್ಞಾನಿ ಕೊಡೇಕಲ್‌ ಬಸವಣ್ಣ ಅವರು ಎಲ್ಲ ಪಕ್ಷಗಳಲ್ಲೂ ಆಂತರಿಕ ಕಚ್ಚಾಟ ಶುರುವಾಗಲಿದೆ. ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ದೀಪಾವಳಿ ಹಬ್ಬದಂದು ಕೊಡೇಕಲ್ ಗ್ರಾಮದ ಕಾಲಜ್ಞಾನಿ ಬಸವಣ್ಣ ಅವರು  ರಾಜ್ಯದ ಎಲ್ಲಾ ಪಕ್ಷಗಳಲ್ಲೂ ಆಂತರಿಕ ಕಚ್ಚಾಟ ಆರಂಭವಾಗಿದೆ. ಕೂಡಲೇ ತಮ್ಮ ತಮ್ಮ ಪಕ್ಷಗಳಲ್ಲಿನ ಗೊಂದಲಗಳನ್ನು ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ಕಂಟಕವಾಗಲಿದೆ. ಒಂದು ವೇಳೆ ಎಲ್ಲರೂ ವಿಶ್ವಾಸದಿಂದ ಹೋಗದಿದ್ದರೆ ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕಾಲಜ್ಞಾನಿ ಬಸವಣ್ಣ ಅವರ ಭವಿಷ್ಯದಂತೆ ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಆಂತರಿಕ ಕಲಹಗಳು ಶುರುವಾಗಿರುವುದು ಗೋಚರವಾಗುತ್ತಿದೆ.

ಪಕ್ಷದಲ್ಲಿನ ಆಂತರಿಕ ಕಚ್ಚಾಟದಿಂದ ಇಂಡಿ ಮೈತ್ರಿ ಒಕ್ಕೂಟದಲ್ಲೂ ಗೊಂದಲ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದರಿಂದಾಗಿ ಇಂಡಿ ಒಕ್ಕೂಟದಿಂದ ಹಲವರು ಹೊರಬರಬಹುದು. ಹಲವು ಪಕ್ಷಗಳು ಇಂಡಿ ಒಕ್ಕೂಟವನ್ನು ಸೇರಿ ಅಧಿಕಾರ ಪಡೆಯಲು ಯತ್ನ ಮಾಡುತ್ತಿವೆ. ಹಲವರು ಸೇರಿ ಅಧಿಕಾರ ಪಡೆಯಲು ಮುಂದಾಗಿರುವವರು ಸಹ ಎಚ್ಚರಿಕೆ ಹೆಜ್ಜೆ ಇಡಬೇಕು ಎಂಬ ಸುಳಿವನ್ನು ನೀಡಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ದಲಿತ ಮುಖ್ಯಮಂತ್ರಿ ಕೂಗು ಹಾಗೂ ಮೂರು ಡಿಸಿಎಂ ಕೂಗು ಜೋರಾಗಿ ಸದ್ದು ಮಾಡುತ್ತಿದೆ. ಇನ್ನು ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಹಲವರು ಮಾತನಾಡಿದ್ದು, ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಎಂದು ಕೆಲವರು ಹೇಳಿದರೆ, ಇನ್ನು ಎರಡು ವರ್ಷಗಳಲ್ಲಿ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗ್ತಾರೆ ಎಂದು ಮತ್ತೆ ಕೆಲವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು