News Karnataka Kannada
Friday, April 26 2024
ಕರಾವಳಿ

ಕರಾವಳಿಯಲ್ಲಿ ಮಳೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Photo Credit :

ಕರಾವಳಿಯಲ್ಲಿ ಮಳೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕಳೆದ ಎರಡು ದಿನಗಳಿಂದ ಮಲೆನಾಡು ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದರಿಂದ ಬುಧವಾರ(ಆ.8ರಂದು) ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ರಜೆ ಘೋಷಣೆ ಮಾಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ 48 ಗಂಟೆಗಳವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾ ವಿಫತ್ತು ನಿರ್ವಹಣಾ ಪ್ರಾಧಿಕಾರವು ಎಚ್ಚರಿಕೆ ನೀಡಿದೆ.

ಸೋಮವಾರ ರಾತ್ರಿಯಿಂದ ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾದ ಬಗ್ಗೆ ವಿವಿಧ ತಾಲ್ಲೂಕುಗಳಿಂದ ವರದಿಯಾಗಿದೆ.

ಮೀನುಗಾರರು ಮುಂದಿನ ಮೂರು ದಿನಗಳವರೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಜನರು ಪ್ರಾಕೃತಿಕ ವಿಕೋಪಕ್ಕೆ ಒಳಗಾದಲ್ಲಿ ತುರ್ತು ಸೇವೆಗೆ 1077 ಕಂಟ್ರೋಲ್ ರೂಮ್ ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು