ಬೆಂಗಳೂರು: ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಶೇ 2ರಷ್ಟು ಹೆಚ್ಚಿಸಿ ಹೊರಡಿಸಿದ ಆದೇಶದ ಹಿನ್ನೆಲೆ ಶುಕ್ರವಾರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ಗೆ ಪೆಟ್ರೋಲ್ ದರ ₹79.41 ಹಾಗೂ ಡೀಸೆಲ್ ದರ ₹70.78ಕ್ಕೆ ಏರಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಪೆಟ್ರೋಲ್ ದರ ₹78.05, ಡೀಸೆಲ್ ದರ ₹ 69.46 ಇತ್ತು. ರಾಜ್ಯ ಸರ್ಕಾರ ಪ್ರತಿ ಲೀಟರ್ಗೆ ಕ್ರಮವಾಗಿ ₹ 1.14 ಮತ್ತು ಡೀಸೆಲ್ ದರ ₹ 1.12 ಏರಿಸಿದೆ.