ಕಾರ್ಕಳ: ಕ್ರೀಡೆಯಲ್ಲಿ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸಿ, ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಶಾಲೆಗಳಿಂದ ಪ್ರೋತ್ಸಾಹ ಸಿಕ್ಕಿದಾಗ ರಾಷ್ಟ್ರಮಟ್ಟ, ಅಂತರಾಷ್ಟೀಯ ಮಟ್ಟದಲ್ಲಿ ಮಿಂಚಲು ಸಾಧ್ಯ. ಸಾಧನೆಗೆ ದೃಢಕಾಯ ದೇಹ ಅಗತ್ಯವೆಂದು ಅಥ್ಲೀಟ್ ಪಟು ಅಪ್ಸರಾ ಕಟೀಲ್ ಹೇಳಿದರು.
ಕಾಂತಾವರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ವೈಯಕ್ತಿಕ ಹಾಗೂ ರಾಷ್ಟ್ರದ ಏಳಿಗೆಯಲ್ಲಿ ಮಹತ್ತರ ಪಾತ್ರ ವಹಿಸಬಹುದು. ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಕಾರ್ಯಸಾಧನೆಯ ಬಗ್ಗೆ ಶ್ಲಾಘಿಸಿದರು. ಆಡಳಿತಾಧಿಕಾರಿ ಅಶೋಕ್ ಕುಮಾರ್.ಕೆ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಪ್ರಾಂಶುಪಾಲರುಗಳಾದ ರಾಘವೇಂದ್ರ ಶೆಣೈ , ಗಜಾನನ ಭಟ್, ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೀಣಾ ಶೇಡಿಕಜೆ ನಿರ್ವಹಿಸಿದರು. ಶಿಕ್ಷಕಿ ಸವಿತಾ ಸ್ವಾಗತಿಸಿದರು. ಉಪನ್ಯಾಸಕಿ ಜಾನೀಸ್ ವಂದಿಸಿದರು. ಸಮಾರೋಪ ಸಮಾರಂಭದಲಿ ವಿಜೇತ ವಿದ್ಯಾರ್ಥಿಗಳಿಗೆ ಆಡಳಿತಾಧಿಕಾರಿ ಅಶೋಕ್ ಕುಮಾರ್ ಕೆ ಬಹುಮಾನ ವಿತರಿಸಿದರು.