News Kannada
Thursday, July 07 2022

ಕರಾವಳಿ

ಸುಬ್ರಹ್ಮಣ್ಯ ಸ್ವಾಮಿ ಆರೋಪ ತೀವ್ರ ಖಂಡನೀಯ: ಕಾಂಗ್ರೆಸ್ ಪ್ರತಿಭಟನೆ - 1 min read

Photo Credit :

ಸುಬ್ರಹ್ಮಣ್ಯ ಸ್ವಾಮಿ ಆರೋಪ ತೀವ್ರ ಖಂಡನೀಯ: ಕಾಂಗ್ರೆಸ್ ಪ್ರತಿಭಟನೆ

ಬಂಟ್ವಾಳ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ಮಾಡಿರುವ ಆರೋಪ ತೀವ್ರ ಖಂಡನೀಯವಾಗಿದ್ದು, ಕಾಂಗ್ರೆಸ್ ನಾಯಕರ ಮೇಲಿನ ಸುಳ್ಳು ಆರೋಪ ಹೊರಿಸಿದೆ.  ಈ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಜಯವಾಗಲಿದೆ ಎಂದು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ಮಾಡಿರುವ ಆರೋಪವನ್ನು ಖಂಡಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಮೂಡಾ ವಲಯ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬಿ.ಸಿ.ರೋಡ್ ನಲ್ಲಿ ನಡೆಸಿದ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಸದಸ್ಯಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಮಾಡುತ್ತಿರುವ ಅಕ್ರಮಗಳನ್ನು ಮರೆಮಾಚಲು ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದ ಬಿಜೆಪಿ, ಜನರ ಭಾವನೆಗಳನ್ನು ತಿರುಗಿಸಲು ಇಂತಹ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.

ಧರಣಿಯಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪುರಸಭೆ ಸದಸ್ಯರಾದ ಸದಾಶಿವ ಬಂಗೇರ, ರಾಮಕೃಷ್ಣ ಆಳ್ವ, ಮುಹಮ್ಮದ್ ನಂದರಬೆಟ್ಟು, ಮುಹಮ್ಮದ್ ಶರೀಫ್, ಪ್ರಭಾ ಸಾಲಿಯಾನ್, ಅಬೂಬಕ್ಕರ್ ಗೂಡಿನಬಳಿ, ಲೋಲಾಕ್ಷ ಶೆಟ್ಟಿ, ಪರಮೇಶ್ವರ್, ಮುಹಮ್ಮದ್ ನಂದಾವರ, ಲುಕ್ಮಾನ್, ಅಬೂಬಕ್ಕರ್ ಸಿದ್ದೀಕ್ ಮೊದಲಾದವರು ಉಪಸ್ಥಿತರಿದ್ದರು.

 

See also  ‘ಚಿನ್ನದ ಹುಡುಗ’ ನೀರಜ್‌ ಚೋಪ್ರಾ ಕುರಿತು ಸಿನಿಮಾ: ಕರಾವಳಿ ನಿರ್ಮಾಪಕನ ಆಸಕ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು