ಕಾಸರಗೋಡು: ರಾಜ್ಯ ಹೆದ್ದಾರಿಯ ಚೆಮ್ನಾಡ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಗಾಯಗೊಂಡ ಘಟನೆ ಸೋಮವಾರ ಅಪರಾಹ್ನ ನಡೆದಿದೆ.
ಕಾರು, ಬೈಕ್ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಜ್ಜು ಗುಜ್ಜಾಗಿದ್ದು, ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಬಿದ್ದಿದೆ. ಟೆಂಪೋದಲ್ಲಿದ್ದ ಇಬ್ಬರು ಮತ್ತು ಬೈಕ್ ಸವಾರ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಚಳಿಯ೦ಗೋಡಿಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಬಳಿಕ ಟೆಂಪೋಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ಎರಡು ವಾಹನಗಳೆಡೆಗೆ ಸಿಲುಕಿತ್ತು. ಅಪಘಾತದ ಬಳಿಕ ಹಲವು ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.