ಕಾಸರಗೋಡು: ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ನಡೆಸಿದ ಕಾರ್ಯಾಚರಣೆಯಿಂದ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 15 ಲಕ್ಷ ರೂ.ಮೌಲ್ಯದ ಬೆಳ್ಳಿ ಮತ್ತು 94 ಸಾವಿರ ರೂ.ವನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ತಮಿಳ್ನಾಡು ಚೆನ್ನೈ ನಿವಾಸಿ ಮಹಾಲಿಂಗ (50) ಮತ್ತು ಜಯಕುಮಾರ್ (32) ಎಂದು ಗುರುತಿಸಲಾಗಿದೆ. ಶನಿವಾರದಂದು ಮಧ್ಯಾಹ್ನ ಮಂಜೇಶ್ವರ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸಿನ ಹಿಂಬದಿಯ ಸೀಟಿನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿದ್ದ ಚೀಲವನ್ನು ಪರಿಶೀಲಿಸಿದಾಗ ಬೆಳ್ಳಿ ಮತ್ತು ನಗದು ಪತ್ತೆಯಾಗಿದೆ. ಈ ಸಂಬಂಧ ಆರೋಪಿ ಮಹಾಲಿಂಗ ಎಂಬಾತನನ್ನು ವಶಕ್ಕೆ ತೆಗೆಯಲಾಗಿದೆ. ಇನ್ನು ಆರೋಪಿಯನ್ನು ಹಾಗೂ ಮಾಲನ್ನು ಮಂಜೆಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗುವುದಾಗಿ ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.