ಕಾಸರಗೋಡು: ಕುಂಬಳೆ ಶಿರಿಯ ಬಸ್ಸು ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸುಳ್ಯ ಕಾಂತಮಂಗಲದ ಶರತ್ ಕುಮಾರ್ ( 54) ಎಂದು ಗುರುತಿಸಲಾಗಿದೆ. ಕುಂಬಳೆ ಶಿರಿಯ ಬಸ್ಸು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ನಿಂತಿದ್ದ ಈತನನ್ನು ಕುಂಬಳೆ ಪೊಲೀಸರು ಈತನ ಬಳಿ ಇದ್ದ ಪ್ಲಾಸ್ಟಿಕ್ ಚೀಲವನ್ನು ತಪಾಸಣೆ ನಡೆಸಿದಾಗ ಅರ್ಧ ಕಿಲೋ ಗಾಂಜಾ ಪತ್ತೆಯಾಗಿದೆ.
ಸಣ್ಣ ಗಾತ್ರದ ಪ್ಲಾಸ್ಟಿಕ್ ಚೀಲಗಳು ಪತ್ತೆಯಾಗಿದ್ದು, ಇದರಲ್ಲಿ ಗಾ೦ಜಾ ತುಂಬಿಸಿ ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈತನ ವಿರುದ್ದ ಸುಳ್ಯ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ .