ಮೂಡುಬಿದಿರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಮತ್ತು ಮಂಗಳೂರು ವಿ.ವಿ. ಜಂಟಿ ಆಶ್ರಯದಲ್ಲಿ ಜರುಗಿದ ಅಂತರ್ ಕಾಲೇಜು ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಆಳ್ವಾಸ್ ಕಾಲೇಜಿನ ತಂಡ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಆಳ್ವಾಸ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಎರಡೂ ವಿಭಾಗದಲ್ಲೂ ತಂಡ ಪ್ರಶಸ್ತಿಯನ್ನು ಪಡೆದಿದೆ. ಪುರುಷರ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಎಸ್.ಡಿ.ಎಂ. ಕಾಲೇಜಿನ ಮಂಜುನಾಥ ಪಡೆದರೆ, ಮಹಿಳಾ ವಿಭಾಗದ ಬೆಸ್ಟ್ ಲಿಫ್ಟರ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಮೆರಿನಾ ದೇವಿ ಪಡೆದಿದ್ದಾರೆ. ಮೆರಿನಾ ದೇವಿ ಜನವರಿಯಲ್ಲಿ ಗುಂಟೂರಿನಲ್ಲಿ ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಪವರ್ ಲಿಫ್ಟಿಂಗ್ನಲ್ಲೂ ಚಿನ್ನದ ಪದಕವನ್ನು ಪಡೆದಿದ್ದರು.