News Kannada
Friday, July 01 2022

ಕರಾವಳಿ

ಮೆಣಸಿನ ಹುಡಿ ಎರಚಿ ಯುವಕನಿಗೆ ಹಲ್ಲೆ - 1 min read

Photo Credit :

ಮೆಣಸಿನ ಹುಡಿ ಎರಚಿ ಯುವಕನಿಗೆ ಹಲ್ಲೆ

ಮೂಡುಬಿದಿರೆ: ಮನೆಯಿಂದ ಆಸ್ಪತ್ರೆಗೆ ಹೋಗುತಿದ್ದ ಯುವಕನೊಬ್ಬ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬಳು ಆತನನ್ನು ಅಡ್ಡಗಟ್ಟಿ ಮೆಣಸಿನ ಹುಡಿ ಎರಚಿದ ಘಟನೆ ಬಡಗಮಿಜಾರು ಗ್ರಾಮದ ಕೊಪ್ಪದ ಕುಮೇರ್ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.


ಕೊಪ್ಪದ ಕುಮೇರ್ ನಿವಾಸಿ, ಭಾನುವಾರ ರಾತ್ರಿ ರವಿ ದೇವಾಡಿಗ ಎಂಬವರಿಂದ ಹಲ್ಲೆಗೊಳಗಾಗಿದ್ದ ದಿನೇಶ್ ಎಂಬವರೇ ಮತ್ತೆ ಹಲ್ಲೆಗೊಳಗಾದವರಾಗಿದ್ದಾರೆ. ಭಾನುವಾರ ರವಿ ದೇವಾಡಿಗ ಹಾಗೂ ಅವರ ಪುತ್ರಿಯರು ದಿನೇಶ್ ಅವರ ಮೇಲೆ ಹಲ್ಲೆ ನಡೆಸಿದ್ದು, ದಿನೇಶ್ ಹಾಗೂ ಸ್ಥಳೀಯರು ಮಂಗಳವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಲ್ಲೆ ಪ್ರಕರಣದಲ್ಲಿ ಗಾಯಗೊಳಗಾಗಿದ್ದ ದಿನೇಶ್ ಅವರು, ಮೂಡುಬಿದಿರೆ ಆಸ್ಪತ್ರೆಗೆ ಹೋಗುವ ಸಂದರ್ಭದಲ್ಲಿ,ರವಿ ದೇವಾಡಿಗನ ಪತ್ರಿಯರು ದ್ವಿಚಕ್ರ ವಾಹನ ಅಡಗಟ್ಟಿ ಮತ್ತೆ ಹಲ್ಲೆ ನಡೆಸಿದ್ದಾರೆ. ರವಿ ದೇವಾಡಿಗ ಅವರ ಮನೆಯ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ದಿನೇಶ್ ಹಾದು ಹೋಗುತ್ತಿದ್ದ ಸಂದರ್ಭ ರವಿ ದೇವಾಡಿಗ ಅವರ ಪುತ್ರಿಯೊಬ್ಬಳು ಅಡ್ಡಗಟ್ಟಿದ್ದಾಳೆ. ಬಳಿಕ ಮೆಣಸಿನ ಹುಡಿ ಎರಚಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮೂಡುಬಿದರೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸಿದರು. ರವಿ ದೇವಾಡಿಗ ಹಾಗೂ ಆತನ ಪುತ್ರಿಯರು ಅಮಾಯಕರ ಮೇಲೆ ಹಲ್ಲೆ ನಡೆಸುವುದು, ಯುವಕರ ಮೇಲೆ ಸುಳ್ಳು ಆರೋಪ ಮಾಡಿರುವುದು ಹೆಚ್ಚಾಗುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಂಡು, ಅವರನ್ನು ಬಡಗಮಿಜಾರು ಗ್ರಾಮದಿಂದ ಗಡಿಪಾರು ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಮೂಡುಬಿದರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲು-ಸುಭಾಸ್ ನಗರ ಕೂಡ ಕಳೆದ ವರ್ಷ ಈ ಕುಟುಂಬ ಇದೇ ರೀತಿ ಅವಾಂತರ ಮಾಡಿ, ಸ್ಥಳೀಯ ಯುವಕರ ಮೇಲೆ ಸುಳ್ಳು ಆರೋಪ ಮಾಡಿರುವುದು ಕೇಸು ಕೂಡ ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

See also  ಹಾವು ಹಿಡಿಯಲು ಅರಣ್ಯ ಇಲಾಖೆಯ ಅನುಮತಿ ಅಗತ್ಯ: ಉರಗ ತಜ್ಞ ಐತಾಳ್ ಗೆ ನೊಟೀಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು