News Kannada
Tuesday, July 05 2022

ಕರಾವಳಿ

8ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ - 1 min read

Photo Credit :

   8ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ

ಬಂಟ್ವಾಳ: ಪುಂಜಾಲಕಟ್ಟೆ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ವತಿಯಿಂದ ಫೆ.28ರಂದು ನಡೆಯಲಿರುವ 8ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ  ಭಾನುವಾರ ಪುಂಜಾಲಕಟ್ಟೆ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ಜರಗಿತು.


ಮಂಗಳೂರು ಬಜಾಜ್ ಅಲಯನ್ಸ್ ರೀಜನಲ್ ಮೆನೇಜರ್ ಪದ್ಮನಾಭ ಸುವರ್ಣ  ಅವರು ಕಾರ್ಯಕ್ರಮ ಉದ್ಘಾಟಿಸಿದರು. ಚೆನ್ನೈತ್ತೋಡಿ ಗ್ರಾ.ಪಂ.ಸದಸ್ಯ ಕಾಪು ಜಯರಾಮ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಬಡಗಕಜೆಕಾರು ಗ್ರಾ.ಪಂ.ಅಧ್ಯಕ್ಷ ವಜ್ರ ಪೂಜಾರಿ,ವಾಮದಪದವು ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಸಂಗಬೆಟ್ಟು ಗ್ರಾ.ಪಂ.ಸದಸ್ಯ ಎಸ್.ಪಿ.ಶ್ರೀಧರ್, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಿಲಾತಬೆಟ್ಟು ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ,ನಿರ್ದೇಶಕ ಸೀತಾರಾಮ ಶೆಟ್ಟಿ ಸೇವಾ, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷೆ ಸುಜಾತ ,ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಸಂತೋಷ್ ಮೂರ್ಜೆ, ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ  ,ಕ್ಲಬ್ ಗೌರವಾಧ್ಯಕ್ಷ ಅಬ್ದುಲ್ಲಾ ಪಿ.,ಕಾರ್ಯದರ್ಶಿ ಜಯರಾಜ ಅತ್ತಾಜೆ,ಕೋಶಾಧಿಕಾರಿ ರಾಜೇಶ್ ಬಂಗೇರ ಪುಳಿಮಜಲು,ದೇವಪ್ಪ ಶೆಟ್ಟಿ ಕುಂಟಜಾಲು,ಗಿರೀಶ್ ಸಾಲ್ಯಾನ್ ಹೆಗ್ಡೆಬೆಟ್ಟು,ಪ್ರಶಾಂರ್ತ ಪೂಜಾರಿ ನಾಕುನಾಡು ಉಪಸ್ಥಿತರಿದ್ದರು. 20ಜೋಡಿ ವಧು-ವರರು ಸೇರಿದಂತೆ ಅವರವರ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ  ವದು-ವರರಿಗೆ ವಿವಾಹ ಮಂಗಳ ವಸ್ತ್ರ ವಿತರಿಸಲಾಯಿತು.ವಧು-ವರರು ಉಂಗುರ ವಿನಿಮಯ ಮಾಡಿಕೊಂಡರು.  ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎ.ಅವರು ಸ್ವಾಗತಿಸಿದರು.ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಸ್ತಾವಿಸಿದರು.ಭರತ್ರಾಜ್ ಜೈನ್ ವಂದಿಸಿದರು. ರಂಗ ಕಲಾವಿದ ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.

       

 

See also  ವಿಳಾಸ ಕೇಳುವ ನೆಪ: ಯುವಕರಿಬ್ಬರಿಗೆ ಚೂರಿಯಿಂದ ಇರಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು