ಮಂಗಳೂರು: ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಂಜನಾಡಿಯ ಉರುಮನೆ ಎಂಬಲ್ಲಿಂದ ಮಂಗಳವಾರ ಬಂಧಿಸಿ ಸುಮಾರು 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಂಜನಾಡಿ ನೆತ್ತಿಲಪದವು ನಿವಾಸಿ ಆತಿಂ(28) ಬಂಧಿತ. ಮಂಜನಾಡಿ ಕಡೆಯಿಂದ ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರಿಕ್ಷಾ , 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಠಾಣಾಧಿಕಾರಿ ಅಶೋಕ್ ಮತ್ತು ಪಿಎಸ್ಐ ಸುಧಾಕರ್ ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.