ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಪಾನ್ ಮಸಾಲ ಸಹಿತ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಇಸ್ಮಾಯಿಲ್ (31) ಎಂದು ಗುರುತಿಸಲಾಗಿದೆ. ಹೊಸಂಗಡಿ-ಮಂಗಳೂರಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಪಾನ್ ಮಸಾಲ ಸಾಗಾಟ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಸಾಗಿಸುತ್ತಿದ್ದ ಏಳು ಸಾವಿರ ಪ್ಯಾಕೆಟ್ ಪಾನ್ ಮಸಾಲ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೇರಳದಲ್ಲಿ ಪಾನ್ ಮಸಾಲ ಉತ್ಪನ್ನಗಳಿಗೆ ನಿಷೇಧ ಹೇರಲಾಗಿದ್ದು, ಹೊರ ರಾಜ್ಯದಿಂದ ಅಕ್ರಮವಾಗಿ ಪಾನ್ ಮಸಾಲ ಸಾಗಾಟ ಹೆಚ್ಚುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಐದಕ್ಕೂ ಅಧಿಕ ಸಾಗಾಟ ಪ್ರಕರಣಗಳು ಪತ್ತೆಯಾಗಿದೆ. ಕರ್ನಾಟಕದಿಂದ ಪಾನ್ ಮಸಾಲ ಉತ್ಪನ್ನಗಳ ಅಕ್ರಮ ಸಾಗಾಟ ಹೆಚ್ಚುತ್ತಿರುವುದರಿಂದ ವಾಹನ ತಪಾಸಣೆ ತೀವ್ರಗೊಳಿಸಲಾಗುವುದು ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.