News Kannada

ಕರಾವಳಿ

ಬಸ್ ನಿರ್ವಾಹಕನಿಗೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ - 1 min read

ಬಸ್ ನಿರ್ವಾಹಕನಿಗೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ

ಬಂಟ್ವಾಳ: ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುಚ್ಚೆಮೊಗರು ನಲ್ಲಿ ಖಾಸಗಿ ಬಸ್ಸೊಂದರ ನಿರ್ವಾಹಕನಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮೂಡಬಿದಿರೆ-ಬಂಟ್ವಾಳ ನಡುವೆ ಓಡಾಡುತ್ತಿರುವ ಎಲ್ಲಾ ಖಾಸಗಿ ಬಸ್ ಗಳು ಗುರುವಾರ ಬೆಳಗ್ಗೆಯಿಂದಲೇ ಹಠಾತ್ತನೆ ಸಂಚಾರವನ್ನು ಸ್ಥಗಿತಗೊಳಿಸಿ ಚಾಲಕರು ಹಾಗೂ ನಿರ್ವಾಹಕರು ವಿವಿಧ ಸಂಘಟನೆಗಳ ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಸಿದ್ದಕಟ್ಟೆ ಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.


ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಹೊತ್ತುಗಳ ಕಾಲ ಬಿಗುವಿನ ವಾತಾವರಣ ಉಂಟಾಯಿತು. ಸುದ್ದಿ ತಿಳಿದ ಬಂಟ್ವಾಳ ಗ್ರಾಮಾಂತರ ,ಪುಂಜಾಲಕಟ್ಟೆ ಹಾಗೂ ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನಾ ಕಾರರನ್ನು ಸಮಾಧಾನ ಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಈ ವೇಳೆ ಪ್ರತಿಭಟನಾಕಾರರು ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವನ್ನು ವಿಧಿಸಿದರು. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.

ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ,ಬಿಜೆಪಿ ಮುಖಂಡರಾದ ಜಗದೀಶ್ ಅಕಾರಿ,ಸುಲೋಚನಾ ಜಿ.ಕೆ.ಭಟ್,ತಾ.ಪಂ.ಸದಸ್ಯ ಪ್ರಭಾಕರ ಪ್ರಭು,ಸಂಗಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಸತೀಶ್ ಪೂಜಾರಿ ಹಾಗೂ ಸ್ಥಳೀಯರು ಪ್ರತಿಭಟನಾಕಾರರಿಗೆ ಬೆಂಬಲ ವ್ಯಕ್ತಪಡಿಸಿದರು.

ಎರಡು ದಿನಗಳ ಹಿಂದೆ ಖಾಸಗಿ ಬಸ್ವೊಂದರ ನಿರ್ವಾಹಕ ಯೋಗೀಶ್ ಅವರಿಗೆ ಕ್ಷುಲ್ಲಕ ಕಾರಣಕ್ಕೆ ನಾಲ್ವರ ತಂಡವೊಂದು ಪುಚ್ಚೆಮೊಗರು ಸಮೀಪದ ಶಾಂತಿರಾಜ್ ಕಾಲನಿಯಲ್ಲಿ ಬಸ್ಸನ್ನು ತಡೆದು ಹಲ್ಲೆಗೈಯ್ಯಲಾಗಿದ್ದರೆ ಚಾಲಕ ನವೀನ ಅವರಿಗೆ ಚೂರಿ ತೋರಿಸಿ ಬೆದರಿಕೆ ಒಡ್ಡಲಾಗಿತ್ತು.ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಿರಲಿಲ್ಲ.ಇದರಿಂದ ಆಕ್ರೋಶಿತರಾದ ಬಂಟ್ವಾಳ -ಮೂಡಬಿದಿರೆ ನಡುವೆ ಓಡಾಡುವ ಖಾಸಗಿ ಬಸ್ಗಳ ಚಾಲಕರು ಹಾಗೂ ನಿರ್ವಾಹಕರು ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದರು.

ಈ ದಿಢೀರ್ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಈ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರು ತೊಂದರೆಗೊಳಪಡುವಂತಾಯಿತು.ಗುರುವಾರದಂದು ಪ್ರಥಮ ಪಿಯುಸಿಯ ಪರೀಕ್ಷೆ ನಡೆಯುತ್ತಿದ್ದರಿಂದ ಈ ತರಗತಿಯ ವಿದ್ಯಾರ್ಥಿಗಳಂತೂ ತೀವ್ರ ಆತಂಕಕ್ಕೊಳಗಾಗಿ ಖಾಸಗಿ ವಾಹನಗಳ ಮೊರೆ ಹೋಗಬೇಕಾಯಿತು. ಕೆಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.ರಾತ್ರಿವರೆಗೂ ಈ ರೂಟಿನ ಯಾವುದೇ ಖಾಸಗಿ ಬಸ್ ಗಳು ರಸ್ತೆಗಿಳಿಯಲಿಲ್ಲ.

ಡಿವೈಎಸ್ಪಿ ಭಾಸ್ಕರ್ ರೈ,ಮೂಡಬಿದಿರೆ ಇನ್ಸ್ಪೆಕ್ಟರ್ ಅನಂತ ಪದ್ಮನಾಭ,ಎಸ್ಸೈಗಳಾದ ರಕ್ಷಿತ್,ಲತೇಶ್ ಕುಮಾರ್ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಬಸ್ ಸಂಚಾರ ಆರಂಭಿಸುವಂತೆ ಮನವಿ ಮಾಡಿದರೂ ಸಫಲವಾಗಲಿಲ್ಲ.

See also  ಆಗಸ್ಟ್ 15ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು