News Kannada
Tuesday, October 04 2022

ಕರಾವಳಿ

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಮತ್ತು ಮಲ್ಟಿಜಿಂ ಉದ್ಘಾಟನೆ - 1 min read

Photo Credit :

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಮತ್ತು ಮಲ್ಟಿಜಿಂ ಉದ್ಘಾಟನೆ

ಸುಳ್ಯ: ಪ್ರತಿಯೊಬ್ಬರೂ ಅಕ್ಷರ ಜ್ಞಾನ ಮತ್ತು ಉನ್ನತ ಶಿಕ್ಷಣ ಪಡೆದರೆ ಶೋಷಣೆ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ತೀರಾ ಕಡಿಮೆ. ಹೆಣ್ಣು ಮಕ್ಕಳು ಸೇರಿದಂತೆ ಎಲ್ಲರೂ  ಕಾಲೇಜು ಶಿಕ್ಷಣ ಪಡೆದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು. ಅದಕ್ಕಾಗಿ ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳಿಗೂ ಉತ್ತಮ ಮೂಲಭೂತ ಸೌಕರ್ಯವನ್ನು ಒದಗಿಸಬೇಕು. ನಮ್ಮ ನಾಡಿನ ಶಿಕ್ಷಣ ಸಂಸ್ಥೆಗಳೂ ಬೆಳವಣಿಗೆಯಾಗಲು ಪೋಷಕರು ಮತ್ತು ಊರ ಜನತೆ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು. ಹಿಂದೆಲ್ಲ ಸಾಮಾನ್ಯ ಜನರಿಗೆ ಉನ್ನತ ಶಿಕ್ಷಣ ಮರೀಚಿಕೆಯಾಗಿತ್ತು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ಸರ್ವಶಿಕ್ಷಾ ಅಭಿಯಾನದ ಮೂಲಕ ಪ್ರಾಥಮಿಕ ಶಾಲೆಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಿತ್ತು. ಇದೀಗ ಮಾಧ್ಯಮಿಕ ಸರ್ವಶಿಕ್ಷಾ ಅಭಿಯಾನದ ಮೂಲಕ ಪ್ರೌಢಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುತಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಇಂದು ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯವನ್ನು ಒದಗಿಸಲಾಗುತಿದೆ. ಆದರೆ ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮಾನಸಿಕತೆ ಬದಲಾಗಬೇಕು ಎಂದರು. ಸರ್ಕಾರಿ ಸಂಸ್ಥೆಯಲ್ಲಿ ಶಿಕ್ಷಣ ಬೇಡ ಆದರೆ ಸರ್ಕಾರಿ ಕೆಲಸ ಬೇಕು ಎಂಬ ನಿಲುವು ಬದಲಾಗಬೇಕು ಎಂದು ಅವರು ಹೇಳಿದರು. ಕಾಲೇಜಿನ ಕ್ರೀಡಾಂಗಣದ ವಿಸ್ತರಣೆಗೆ ಐದು ಲಕ್ಷ ರೂ ಅನುದಾನವನ್ನು ನೀಡುವುದಾಗಿ ಅವರು ಘೋಷಿಸಿದರು.

ಕಾಲೇಜಿನಲ್ಲಿ ಸ್ಥಾಪಿಸಸಲಾದ ಮಲ್ಟಿಜಿಂನ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೆರವೇರಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ರಾಜೀವ್ ಗಾಂಧೀ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಡಾ.ಬಿ.ರಘು, ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ಮಂಗಳೂರು ವಿವಿಯ ಸಿಂಡಿಕೇಟ್ ಸದಸ್ಯ ವಿಜಯಕುಮಾರ್ ಸೊರಕೆ, ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಉಬರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್ ಉಬರಡ್ಕ, ನ.ಪಂ.ಸದಸ್ಯ ರಮಾನಂದ ರೈ, ಕಾಲೇಜಿನ ಕಟ್ಟಡ ನಿರ್ಮಾಣ ಮಾಡಿದ ರೈಟ್ಸ್ ಸಂಸ್ಥೆಯ ಇಂಜಿನಿಯರ್ ಅನೀಶ್ ಮುಖ್ಯ ಅತಿಥಿಗಳಾಗಿದ್ದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಪದ್ಮನಾಭ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕೊಂಗಾಜೆ ವಂದಿಸಿದರು. ವಿದ್ಯಾರ್ಥಿನಿ ಅರ್ಚನಾ ಪ್ರಾರ್ಥಿಸಿದರು. ಮನಮೋಹನ ಬಳ್ಳಡ್ಕ ನಿರೂಪಿಸಿದರು. ಒಂದೂವರೆ ಕೋಟಿ ರೂ ವೆಚ್ಚದಲ್ಲಿ ನೂತನ ಕಟ್ಟಡ ಮತ್ತು 15 ಲಕ್ಷ ರೂ ವೆಚ್ಚದಲ್ಲಿ ಮಲ್ಟಿಜಿಂ ನಿರ್ಮಿಸಲಾಗಿದೆ. ಕಾಲೇಜಿನಲ್ಲಿ ಇನ್ನೂ ಆರು ತರಗತಿಗಳು ಸಿಮೆಂಟ್ ಸೀಟ್ನಲ್ಲಿ ನಿರ್ಮಿಸಿದ ತಾತ್ಕಾಲಿಕ ಕಟ್ಟಡದಲ್ಲಿ ಮುಂದುವರಿಯಬೇಕಾಗಿದೆ. ಆದುದರಿಂದ ಆರು ಕೊಠಡಿಗಳ ನಿಮರ್ಾಣಕ್ಕೆ ಅನುದಾನ ನೀಡಬೇಕು, ಕಾಲೇಜಿಗೆ ಹೋಗುವ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು ಎಂದು ವಿದ್ಯಾಥರ್ಿಗಳು ಸಚಿವರಿಗೆ ಮತ್ತು ಇತರ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು.

See also  ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದು ಬಿಜೆಪಿಯ ಗುರಿ: ವೆಂಕಯ್ಯ ನಾಯ್ಡು

ಕಾಲೇಜಿಗೆ ಸೌರ ವಿದ್ಯುತ್ ಘಟಕ:
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕವನ್ನು ಸ್ಥಾಪಿಸುವುದಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಘೋಷಿಸಿದರು. ಸದ್ಯದಲ್ಲಿಯೇ ಸೌರ ವಿದ್ಯುತ್ ಘಟಕದ ಸ್ಥಾಪನೆ ಮಾಡಲಾಗುವುದು. ದ.ಕ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಒಟ್ಟು 50 ಸೌರ ವಿದ್ಯುತ್ ಘಟಕವನ್ನು ಸ್ಥಾಪನೆ ಮಾಡಲು ಯೋಜನೆ ರೂಪಿಸಿರುವುದದಾಗಿ ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು