News Kannada
Friday, September 30 2022

ಕರಾವಳಿ

ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ - 1 min read

Photo Credit :

ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ  ಭೇಟಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ

ಬಂಟ್ವಾಳ: ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ಬಂಟ್ವಾಳ ಪುರಸಭೆಯಿಂದ ನಿರ್ಮಾಣ ಹಂತದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್ ಅವೈಜ್ಞಾನಿಕ ಘನ ತ್ಯಾಜ್ಯ ಘಟಕ ನಿರ್ಮಾಣದಿಂದ ಪರಿಸರದಲ್ಲಿ ಉಂಟಾಗಬಹುದಾದ ದುಷ್ಪರಿಣಾಮಗಳನ್ನು ವಿವರಿಸಿದರು. ಘನ ತ್ಯಾಜ್ಯ ಘಟಕದ ಪಕ್ಕದಲ್ಲಿರುವ ಶಾಲೆ, ಅಂಗನವಾಡಿ, ನೂರಕ್ಕೂ ಅಧಿಕ ಸಂಖ್ಯೆಯಲ್ಲಿರುವ ವಾಸವಿರುವ ಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ ಬಳಿಕವೇ ಘಟಕದಲ್ಲಿ ಕೆಲಸ ಕಾರ್ಯ ಆರಂಭಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದ ಬಳಿಕ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರಪ್ಪ ಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
 

See also  ಪಡಿತರ ಚೀಟಿ, ಆಧಾರ್ ಲಿಂಕ್ ಸಮಸ್ಯೆ: ಜನರ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು