News Kannada
Thursday, September 29 2022

ಕರಾವಳಿ

ಬಿಜೆಪಿ ಕಾರ್ಯಕರ್ತರು- ಪೊಲೀಸರ ನಡುವೆ ನೂಕು ತಳ್ಳಾಟ - 1 min read

Photo Credit :

ಬಿಜೆಪಿ ಕಾರ್ಯಕರ್ತರು- ಪೊಲೀಸರ ನಡುವೆ ನೂಕು ತಳ್ಳಾಟ

ಕಾಸರಗೋಡು: ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ  ಪೊಯಿನಾಚಿಯ ದಂತ ಕಾಲೇಜು ಮಂಗಳವಾರ ನಡೆಸಿದ ಜಾಥಾದ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕು – ತಳ್ಳಾಟ ನಡೆದಿದ್ದು, ಈ ಸಂದರ್ಭದಲ್ಲಿ ನಾಲ್ವರು ಪೊಲೀಸರು ಮತ್ತು ಕಾರ್ಯಕರ್ತರು ಗಾಯಗೊಂಡಿದ್ದಾರೆ.

ಕಾಲೇಜು ಗೇಟ್ ಬಳಿ ಮೆರವಣಿಗೆಯನ್ನು ತಡೆದ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಕಾರ್ಯಕರ್ತರು ಪೊಲೀಸರ ತಡೆಯನ್ನು ಬೇಧಿಸಿ ಮುನ್ನುಗ್ಗಲೆತ್ನಿಸಿದಾಗ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕೆಲ  ಕಾರ್ಯಕರ್ತರು ಗಾಯಗೊಂಡರು.  ಎಂ.ಅಶೋಕನ್,  ವಿ.ಟಿ ಅಬ್ದುಲ್ ಖಾದರ್ ಸೇರಿದಂತೆ ಆರು ಮಂದಿ ಪೊಲೀಸರು ಗಾಯಗೊಂಡರು.

ಪ್ರತಿಭಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ  ಕೆ.ಶ್ರೀಕಾಂತ್  ಉದ್ಘಾಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ವೇಲಾಯುಧನ್, ಪಿ.ಆರ್ ಸುನಿಲ್ ಮೊದಲಾದವರು ಮಾತನಾಡಿದರು. ಕಾಲೇಜಿನಲ್ಲಿ ಮತಾಂತರ ನಡೆಯುತ್ತಿದ್ದು , ಈ ಬಗ್ಗೆ ಆರೋಪಿಸಿರುವ ಯುವಮೋರ್ಚಾ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿತ್ತು.

See also  ಮದ್ಯ ಮಾರಾಟಕ್ಕೆ ಸರಕಾರಿ ಸಿಬ್ಬಂದಿಗಳನ್ನು ನಿಯೋಜಿಸಿರುವುದು ರಾಜ್ಯದ ಜನತೆಯ ದುರದೃಷ್ಟ: ವಿ.ಸುನೀಲ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು