News Kannada
Sunday, September 25 2022

ಕರಾವಳಿ

ಬೆಟ್ಟದಂತೆ ತಲೆ ಎತ್ತಿದೆ ಕಸದ ರಾಶಿ: ಸ್ಥಳೀಯರಿಗೆ ಸಾಂಕ್ರಾಮಿಕ ರೋಗದ ಭೀತಿ - 1 min read

Photo Credit :

ಬೆಟ್ಟದಂತೆ ತಲೆ ಎತ್ತಿದೆ ಕಸದ ರಾಶಿ: ಸ್ಥಳೀಯರಿಗೆ ಸಾಂಕ್ರಾಮಿಕ ರೋಗದ ಭೀತಿ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳಸದಗುರಿ ಎಂಬಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸದ ರಾಶಿ ಬೆಟ್ಟದಂತೆ ತಲೆ ಎತ್ತಿದ್ದು ಸ್ಥಳೀಯ ನಿವಾಸಿಗಳನ್ನು ಸರ್ವ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ. ಸ್ಥಳೀಯರು ಮೌಖಿಕವಾಗಿ, ಲಿಖಿತವಾಗಿ ಮನವಿಗಳನ್ನು ಪದೇ ಪದೇ ಮಾಡುತ್ತಿದ್ದರೂ ಗ್ರಾಮ ಪಂಚಾಯತ್ ಆಡಳಿತವಂತೂ ಈ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣುವುದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಉಜಿರೆ ಗ್ರಾಮದ ಪಳಸದಗುರಿ ಎಂಬಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಳೆಗಾಲದ ಪ್ರಾರಂಭದಿಂದಲೂ ಕಸದ ರಾಶಿ ಪರ್ವತ ರೂಪ ತಾಳಿದ್ದು ಮಲೇರಿಯಾ, ಡೆಂಗ್ಯೂ, ಚಿಕೂನ್ ಗುನ್ಯಾ ಮತ್ತಿತರ ಭಯಾನಕ ರೋಗಗಳ ಭೀತಿ ಸ್ಥಳೀಯ ಕುಟುಂಬಗಳಲ್ಲಿ ಆತಂಕ ಹುಟ್ಟಿಸಿದೆ.

ಇನ್ನೊಂದೆಡೆ ಘನ ತ್ಯಾಜ್ಯ ವಿಲೇವಾರಿ ಘಟಕವು ಎತ್ತರ ಪ್ರದೇಶದಲ್ಲಿದ್ದು, ತಗ್ಗು ಪ್ರದೇಶದಲ್ಲಿರುವ ಸ್ಥಳೀಯರ ಬಾವಿ, ಕೆರೆ, ತೊರೆಗಳ ನೀರು ಕಲುಷಿತಗೊಳಿಸಿರುವುದರಿಂದ ಸ್ಥಳೀಯವಾಗಿ ಯಾವುದೇ ರೋಗಗಳು ಹುಟ್ಟಿಕೊಳ್ಳುವ ಅಪಾಯ ಕಂಡು ಬರುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಈ ಬಗ್ಗೆ ತಾಲೂಕು ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಕೂಡಲೇ ಇತ್ತ ಗಮನ ಹರಿಸಿ ಪಳಸದಗುರಿ ಎಂಬಲ್ಲಿರುವ ಅವೈಜ್ಞಾನಿಕ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಆಡಳಿತಕ್ಕೆ ಸೂಕ್ತ ಕ್ರಮಕ್ಕೆ ಸೂಚಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.  

See also  ಲಾರಿ-ಕಾರು ಡಿಕ್ಕಿ: ಓರ್ವ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು