News Kannada
Friday, September 30 2022

ಕರಾವಳಿ

ಬಿ.ಸಿ.ರೋಡ್ ಸರ್ವೀಸ್ ರಸ್ತೆಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿ - 1 min read

Photo Credit :

ಬಿ.ಸಿ.ರೋಡ್ ಸರ್ವೀಸ್ ರಸ್ತೆಯ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿ

ಬಂಟ್ವಾಳ: ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೆತ್ತಿರುವ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದೆ.

ಸರ್ವಿಸ್ ರಸ್ತೆಯಲ್ಲಿ ಬಸ್ ಗಳು ನಿಲುಗಡೆಯ ಜಾಗದಲ್ಲಿ ನಿತ್ಯ ಟ್ರಾಫಿಕ್ ಸಮಸ್ಯೆ ಕಿರಿ ಕಿರಿ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸಮಸ್ಯೆ ನಿವಾರೆಣೆಗಾಗಿ ಅಗಲೀಕರಣಗೊಳಿಸಿ ಡಾಮರೀಕರಣ ಮಾಡುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷನ್ ಜಿ. ಬೊರಸೆ ಸ್ಥಳೀಯ ಆಡಳಿತದೊಂದಿಗೆ ಮಾತುಕತೆ ನಡೆಸಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದರು. ಕಳೆದ ಒಂದು ವಾರದಿಂದ ಕುಂಟುತ್ತ ಸಾಗುತ್ತಿರುವ ಕಾಮಗಾರಿ ಸಾರ್ವಜನಿಕರಿಗೆ ಇನ್ನಷ್ಟು ಸಮಸ್ಯೆಯನ್ನು ಉಂಟುಮಾಡಿದೆ. ಅಗಲೀಕರಣ ಮಾಡುವ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಸರಿಯಾಗಿ ಮಾಡದ ಹಿನ್ನೆಲೆಯಲ್ಲಿ ಅಂಗಡಿಗಳ ಒಳಗೆ ಮಲೆ ನೀರು ನುಗ್ಗಿ ನಷ್ಟ ಸಂಭವಿಸಿದೆ. ಮತ್ತು ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ನಿಲ್ಲಲು ಸ್ಥಳವಿಲ್ಲದಂತಾಗಿದೆ.

ಅಂಗಡಿಗಳಿಗೆ ನೀರು ನುಗ್ಗಿರುವ ಪರಿಣಾಮ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಹಾನಿಗೀಡಾಗಿವೆ.  ಹೆದ್ದಾರಿ ಇಲಾಖೆ ಮಾಡಬೇಕಾದ ಕಾಮಗಾರಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವುದೇ ಈ ಎಲ್ಲಾ ಅವಾಂತರಗಳಿಗೆ ಕಾರಣ. ಅವೈಜ್ಞಾನಿಕ ಮತ್ತು ಅವ್ಯವಸ್ಥೆಯ ಕಾಮಗಾರಿಯಿಂದಾಗಿ ಬಿ.ಸಿ.ರೋಡಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಭಣಗೊಳ್ಳುತ್ತಿವೆ. ಕಳೆದ ವಾರ ಪೊಲೀಸ್ ಇಲಾಖೆ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನೂ ಅರ್ಧದಲ್ಲೇ ನಿಲ್ಲಿಸಿದರೆ ಸಾರ್ವಜನಿಕರು ಇನ್ನಷ್ಟು ಸಮಸ್ಯೆ ಎದುರಿಸಬೇಕಾಗಿದೆ.
 

See also  ಮಡಪ್ಪಾಡಿಯ ಮಹಾತ್ಮ ಗಾಂಧೀ ಗ್ರಾಮ ಸೇವಾ ತಂಡದ ಸ್ವಚ್ಛತಾ ಆಂದೋಲನ ಐದನೇ ವರ್ಷದಲ್ಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು