News Kannada
Thursday, October 06 2022

ಕರಾವಳಿ

ಕೊರಗ ಕುಟುಂಬಗಳ ಮನೆಗಳಿಗೆ ಭೇಟಿ ಧೈರ್ಯ ತುಂಬಿದ ಎಸ್ಪಿ ಗುಲಾಬ್ ರಾವ್ ಬೊರಸೆ - 1 min read

Photo Credit :

ಕೊರಗ ಕುಟುಂಬಗಳ ಮನೆಗಳಿಗೆ ಭೇಟಿ ಧೈರ್ಯ ತುಂಬಿದ ಎಸ್ಪಿ ಗುಲಾಬ್ ರಾವ್ ಬೊರಸೆ

ಬೆಳ್ತಂಗಡಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಟ್ರಿಂಜೆ ಎಂಬಲ್ಲಿ ಅತ್ಯಂತ ದುಸ್ಥಿತಿಯಲ್ಲಿ ಟರ್ಪಾಲ್ ಅಡಿಯಲ್ಲಿ ವಾಸಿಸುತ್ತಿರುವ ಕೊರಗ ಕುಟುಂಬಗಳ ಮನೆಗಳಿಗೆ ದ. ಕ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಅವರು ಬುಧವಾರ ಸಂಜೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು.

ಇಲ್ಲಿನ ಸಮಸ್ಯೆಗಳ ಬಗ್ಗೆ ಬುಧವಾರ ಬೆಳ್ತಂಗಡಿಯಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಗಮನಸೆಳೆದ ಹಿನ್ನಲೆಯಲ್ಲಿ ಪೋಲೀಸ್ ವರಿಷ್ಠಾಧಿಕಾರಿಯವರು ಕೂಡಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸುರಿಯುವ ಮಳೆಯ ನಡುವೆಯೂ ಅಪಾಯಕಾರಿಯಾದ ನದಿಯನ್ನು ತಾತ್ಕಾಲಿಕ ಮರದ ಸೇತುವೆಯ ಮೂಲಕ ದಾಟಿ ಅವರ ಮನೆಗಳಿಗೆ ತೆರಳಿದ  ಎಸ್.ಪಿ. ಬೊರಸೆ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಇಲ್ಲಿನ ಹೆಚ್ಚಿನ ಕುಟುಂಬಗಳಿಗೆ ಪಡಿತರ ಚೀಟಿ ಇಲ್ಲದಿರುವ ಬಗ್ಗೆ ಮನೆ, ಮನೆ ತೆರಿಗೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳು ಇಲ್ಲದಿರುವ ಬಗ್ಗೆ ಗಮನಿಸಿದ ಎಸ್.ಪಿ. ಅವರು ಈ ಬಗ್ಗೆ ಕ್ರಮ ಕೈಗೊಳ್ಳುವುದಕ್ಕಾಗಿ ಜಿಲ್ಲಾಧಿಕಾರಿಯವರೊಂದಿಗೆ ಹಾಗೂ ಜಿಪಂ ಕಾರ್ಯನಿರ್ವಹಣಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ ಈ ಐದು ಕುಟುಂಬಗಳಿಗೆ ಮನೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು. ಶಾಲೆಗೆ ಹೋಗದೆ ಮನೆಯಲ್ಲಿ ಉಳಿದಿರುವ ಬಾಲಕನಿಗೆ  ವಿದ್ಯಾರ್ಥಿನಿಲಯದಲ್ಲಿ ಅವಕಾಶ ಕಲ್ಪಿಸುವುದಾಗಿಯೂ ಅವರು ತಿಳಿಸಿದರು.

ಇದೀಗ ವಾಸಿಸುತ್ತಿರುವ ಪ್ರದೇಶದಲ್ಲಿ ಸರಕಾರಿ ಜಮೀನಿದ್ದು ಅದನ್ನೇ ಒದಗಿಸುವಂತೆ ಕೊರಗ ಕುಟುಂಬಗಳು ವಿನಂತಿಸಿದಾಗ ಈ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ ನಿಮ್ಮಬೇಡಿಕೆಗಳ ಈಡೇರಿಕೆಗೆ ಅಧಿಕಾರಿಗಳು ಸ್ಪಂದಿಸಲಿದ್ದಾರೆ ಎಂದು ಅವರಲ್ಲಿ ದ್ಯೆರ್ಯ ತುಂಬಿದರು. ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಪಂ ಅಭಿವೃದ್ದಿ ಅಧಿಕಾರಿ ರವಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದದ ಮುಖಂಡರುಗಳು ಉಪಸ್ಥಿತರಿದ್ದರು.

ದಲಿತ ಕುಂದು ಕೊರತೆ ಸಭೆಯಲ್ಲಿ ಕೊರಗರ ದುಸ್ತರ ಬದುಕಿನ ಬಗ್ಗೆ ತಿಳಿದುಕೊಂಡ ಎಸ್.ಪಿ. ಅವರು ತಮ್ಮೆಲ್ಲ ಕಾರ್ಯಗಳನ್ನೂ ಬದಿಗೊತ್ತಿ ಭೇಟಿ ನೀಡಿದ್ದರೂ ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತ್ರ ಇದು ತನಗೆ ಸಂಬಂಧಿಸಿದ ವಿಚಾರವೇ ಅಲ್ಲ ಎಂದು ಸಭೆ ಮುಗಿಸಿ ಹಿಂತಿರುಗಿದ್ದಾರೆ. ಇದು ದಲಿತ ಮುಖಂಡರುಗಳ ಆಕ್ರೋಶಕ್ಕೆ ಕಾರಣವಾಗಿದೆ.

See also  ದೈವಸ್ಥಾನದ ಬೀಗ ಮುರಿದು ಕಳವು: ಆರೋಪಿಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು