News Kannada
Monday, September 26 2022

ಕರಾವಳಿ

ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್: ಕಾಸರಗೋಡಿನಲ್ಲಿ ಬಂದ್ ಯಶಸ್ವಿ - 1 min read

Photo Credit :

ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್: ಕಾಸರಗೋಡಿನಲ್ಲಿ ಬಂದ್ ಯಶಸ್ವಿ

ಕಾಸರಗೋಡು: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ ಕಾಸರಗೋಡಿನಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದ್ದು, ಖಾಸಗಿ ಮತ್ತೆ ಕೆ ಎಸ್ ಆರ್ ಟಿಸಿ ಬಸ್ಸು ಸಂಚಾರ,ಸಂಪೂರ್ಣ ಸ್ಥಗಿತಗೊಂಡಿದೆ.

ದ್ವಿಚಕ್ರ ವಾಹನಗಳು ಸೇರಿದಂತೆ ಕೆಲವೇ ಕೆಲ ಖಾಸಗಿ ವಾಹನಗಳು ಸಂಚಾರ ನಡೆಸುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿದೆ. ಬಹುತೇಕ ಶಾಲೆಗಳಿಗೆ ರಜೆ ನೀಡಲಾಗಿದೆ. ಕಾರ್ಯಾಚರಿಸುತ್ತಿರುವ ಬೆರಳಣಿಕೆಯಷ್ಟು ಶಾಲೆಗಳಲ್ಲಿ ಮಕ್ಕಳ ಕೊರತೆ ಕಂಡು ಬರುತ್ತಿದೆ.

24 ಗಂಟೆ ಮುಷ್ಕರ ಗುರುವಾರ ಮಧ್ಯರಾತ್ರಿ 12ಗಂಟೆಗೆ ಆರಂಭಗೊಂಡಿದ್ದು,  ಬಿಎಂಎಸ್ ಹೊರತುಪಡಿಸಿ ಉಳಿದೆಲ್ಲಾ  ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ. ರಾಜ್ಯದಲ್ಲಿ ಬಿಜೆಪಿ ಬೆಂಬಲಿತ  ಬಿಎಂಎಸ್ ಸಂಘಟನೆ ಹೊರತುಪಡಿಸಿ, ಆಡಳಿತ ಮತ್ತು ಪ್ರತಿಪಕ್ಷ ಕಾರ್ಮಿಕ ಸಂಘಟನೆ ಮುಷ್ಕ್ರಕ್ಕೆ ಕರೆ ನೀಡಿದ್ದರಿಂದ ಬಂದ್ ವಾತಾವರಣ ಕಂಡುಬಂದಿದೆ. ಬೆಳಿಗ್ಗೆ 11:30ಕ್ಕೆ ಕಾರ್ಮಿಕ ಸಂಘಟನೆಗಳು ಕಾಸರಗೋಡು ನಗರದಲ್ಲಿ ಮೆರವಣಿಗೆ ನಡೆಸಲಿದೆ.

ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ.

See also  ಪುನೀತ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ: ಮಿಥುನ್ ರೈ ವಿರುದ್ಧ ಕ್ರಮಕ್ಕೆ ಡಿಸಿಗೆ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು