News Kannada
Thursday, October 06 2022

ಕರಾವಳಿ

ಇಸ್ಮಾಯಿಲ್ ನೇಲ್ಯಮಜಲು ಕೊಲೆ ಪ್ರಕರಣ: ನಾಲ್ವರು ಪೊಲೀಸ್ ಕಸ್ಟಡಿಗೆ, ಮೂವರಿಗೆ ನ್ಯಾಯಾಂಗ ಬಂಧನ - 1 min read

Photo Credit :

ಇಸ್ಮಾಯಿಲ್ ನೇಲ್ಯಮಜಲು ಕೊಲೆ ಪ್ರಕರಣ: ನಾಲ್ವರು ಪೊಲೀಸ್ ಕಸ್ಟಡಿಗೆ, ಮೂವರಿಗೆ ನ್ಯಾಯಾಂಗ ಬಂಧನ

ಸುಳ್ಯ:  ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಕರಾವಳಿ ವಲಯಾಧ್ಯಕ್ಷ ಇಸ್ಮಾಯಿಲ್ ನೇಲ್ಯಮಜಲು(52) ಕೊಲೆ ಪ್ರಕರಣದಲ್ಲಿ ಬಂಧಿತರಾದ ನಾಲ್ವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ ಮತ್ತು ಮೂರು ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ.

Police trace Ismail’s killers, 2 accused in custodyಮಂಗಳವಾರ ಐದು ಮಂದಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಕೆದಿಲ ನಿವಾಸಿ ಉಮ್ಮರ್ ಫಾರೂಖ್(32) ಮತ್ತು ರಹಿಮಾನ್ ಯಾನೆ ರಹೀಮ್ ಬೆಳ್ಳಾರೆ(38)ಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.  ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಬಂಟ್ವಾಳ ಅಮ್ಮುಂಜೆಯ ಅಬ್ದುಲ್ ರಶೀದ್ ಯಾನೆ ಮುನ್ನ(32) ಮತ್ತು ಸುರತ್ಕಲ್ ಕೃಷ್ಣಾಪುರದ ಅಬ್ಬಾಸ್(32) ಎಂಬವರನ್ನೂ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.  ಹೆಚ್ಚಿನ ತನಿಖೆಗಾಗಿ  ಕಸ್ಟಡಿಗೆ ನೀಡುವಂತೆ  ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ನಾಲ್ಕು ಮಂದಿ ಆರೋಪಿಗಳನ್ನು ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟು ಬಂಧಿತರಾದ ಮಂಗಳೂರಿನ ಯಾಕೂಬ್ ಬಿಜೈ (58), ಫಾರೂಕ್ ಬೆಳ್ಳಾರೆ(31) ಮತ್ತು ಸೊಹೈಲ್ ನಂದಾವರ(32) ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಸ್ಮಾಯಿಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ಒಟ್ಟು ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.23ರಂದು ಮಧ್ಯಾಹ್ನ ಇಸ್ಮಾಯಿಲ್ ನೇಲ್ಯಮಜಲು ಐರ್ವನಾಡು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗಿ ಬಂದು ತನ್ನ ಇನ್ನೋವಾ ಕಾರಿನ ಸಮೀಪ ಬರುತ್ತಿದ್ದಂತೆ ಹೊಂಚು ಹಾಕಿ ದಾಳಿ ಮಾಡಿದ ದುಷ್ಕರ್ಮಿಗಳ ತಂಡ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿತ್ತು. ಜಮೀನು ವಿಚಾರದಲ್ಲಿ ಉಂಟಾದ ದ್ವೇಷದಿಂದಾಗಿ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಜಿಲ್ಲಾ ಎಸ್ಪಿ ಭೂಷಣ್ ಗುಲಾಬ್ರಾವ್ ಬೊರಸೆ ಅವರ ಮಾರ್ಗದರ್ಶನದಲ್ಲಿ ಪುತ್ತೂರು ಎಎಸ್ಪಿ ರಿಷ್ಯಂತ್ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸಿರುವ ಪೊಲೀಸರು ಹತ್ತು ದಿನಗಳಲ್ಲಿ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

See also  ಕಂಬಳಕ್ಕೆ ತೆರಳಿದ್ದ ಯುವಕ ಶವವಾಗಿ ಬಾವಿಯಲ್ಲಿ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು