News Kannada
Sunday, October 02 2022

ಕರಾವಳಿ

ನ.18ರಿಂದ 20ರವರೆಗೆ ಆಳ್ವಾಸ್ ಚಿತ್ರಕಲಾ ಮೇಳ-ಪ್ರದರ್ಶನ - 1 min read

Photo Credit :

ನ.18ರಿಂದ 20ರವರೆಗೆ ಆಳ್ವಾಸ್ ಚಿತ್ರಕಲಾ ಮೇಳ-ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ಒಂದು ಬೃಹತ್ ಅಚ್ಚುಕಟ್ಟಾದ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನಚಿತ್ರ ಕಲಾವಿದರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ.

ನವಂಬರ್18ರಿಂದ 20ರವರೆಗೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಂದರ್ಭದಲ್ಲಿ ಏರ್ಪಡಿಸಲಾಗಿರುವ ಈ ಚಿತ್ರಕಲಾ ಮೇಳವು ನಾಡು ನುಡಿಯ ಸಂಸ್ಕೃತಿ ಹಬ್ಬದಲ್ಲಿ ಪಾಲ್ಗೊಳ್ಳುವ ಸಾವಿರಾರು ಕಲಾ ರಸಿಕರಿಗೆ ರಸದೌತಣ ನೀಡಲಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರಕಲಾವಿದರು ತಮ್ಮ ಕಲಾಕೃತಿಗಳ ಪ್ರದರ್ಶನದಜೊತೆಗೆ ಸ್ಥಳದಲ್ಲೇ ಮಾರಾಟವನ್ನೂ ಮಾಡಬಹುದು. ಕಲಾ ಶಾಲೆಗಳ ವಿದ್ಯಾರ್ಥಿಗಳೂ ತಮ್ಮ ಶಾಲಾ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಒಬ್ಬರು ಗರಿಷ್ಟಎರಡು ಮಳಿಗೆಗಳನ್ನು ಪಡೆಯಲು ಅವಕಾಶವಿದೆ. ಕಲಾಕೃತಿಗಳ ಪ್ರದರ್ಶನಕ್ಕಾಗಿ 7 ಅಡಿ ಎತ್ತರ ಹಾಗೂ 10 ಅಡಿ ಅಗಲ ವಿಸ್ತಾರದ ಸಮತಳ ಮಳಿಗೆಗಳನ್ನು ನೀಡಲಾಗುವುದು. ಉಳಿದಂತೆ ಪ್ರದರ್ಶನಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಚಿತ್ರಕಲಾವಿದರೇ ತರಬೇಕಾಗುತ್ತದೆ. 18-11-2016ರ ಬೆಳಿಗ್ಗೆ 9ಗಂಟೆಯೊಳಗೆ ಮಳಿಗೆಗಳಲ್ಲಿ ತಮ್ಮ ಕಲಾಕೃತಿಗಳ ಪ್ರದರ್ಶನ ಸಂಪೂರ್ಣಗೊಳಿಸಿರಬೇಕು.

ಕಲಾವಿದರುತಮ್ಮ ಮಳಿಗೆಗಳಲ್ಲಿ ಚಿತ್ರಕಲೆಯ ಕುರಿತು ಪ್ರಾತ್ಯಕ್ಷಿಕೆ ನೀಡಬಹುದು. ಭಾಗವಹಿಸುವ ಪ್ರತೀ ಚಿತ್ರಕಲಾವಿದರಿಗೂ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕಲಾವಿದರಿಗೆ ಅಭಿನಂದನಾ ಪತ್ರವನ್ನೂನೀಡಲಾಗುವುದು. ಆಸಕ್ತರು ನವಂಬರ್ 15ರೊಳಗೆ ತಮ್ಮ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಬೇಕಾದ ಮಳಿಗೆ ವಿವರ, ಇತ್ಯಾದಿ ವಿವರಗಳೊಂದಿಗೆ ಅರ್ಜಿಗಳನ್ನು’ಅಧ್ಯಕ್ಷರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ-574227 ದ.ಕ’ ಈ ವಿಳಾಸಕ್ಕೆ ಸಲ್ಲಿಸಬಹುದು.ಅರ್ಜಿ ಸಲ್ಲಿಸಿದ ಕಲಾವಿದರಿಗೆ ಮಳಿಗೆ ಸಂಖ್ಯೆ ನೀಡಲಾಗುವುದು.

ಹೆಚ್ಚಿನ ವಿವರಗಳಿಗೆ ಭಾಸ್ಕರ್ ನೆಲ್ಯಾಡಿ 9901114843 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

See also  ಕಲಾವಿದರನ್ನು ಕೈ ಹಿಡಿದು ಮೇಲಕ್ಕೆತ್ತುವ ಜವಾಬ್ದಾರಿ ಕಲಾಭಿಮಾನಿಗಳದ್ದು: ಬಿ.ಜಯಶ್ರೀ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು