News Kannada
Sunday, September 25 2022

ಕರಾವಳಿ

ರಸ್ತೆಬದಿ ಅಂಗಡಿಗಳ ತೆರವು ಕಾರ್ಯಾಚರಣೆ: ಸಾರ್ವಜನಿಕರ ಆಕ್ಷೇಪ - 1 min read

Photo Credit :

ರಸ್ತೆಬದಿ ಅಂಗಡಿಗಳ ತೆರವು ಕಾರ್ಯಾಚರಣೆ: ಸಾರ್ವಜನಿಕರ ಆಕ್ಷೇಪ

ಬಂಟ್ವಾಳ:  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರ ಸೂಚನೆಯ ಮೇರೆಗೆ ಫರಂಗಿಪೇಟೆಯಲ್ಲಿ ಟ್ರಾಫಿಕ್ ಸುವ್ಯವಸ್ಥೆಗೆ ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆ ಬುಧವಾರ ಬೆಳಗ್ಗೆ ರಸ್ತೆಬದಿಯಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ತೆರವು ಕಾರ್ಯಾಚಣೆಯ ವಿರುದ್ಧ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಕೆಲವೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಎಸ್ಪಿ ಭೂಷಣ್ ಜಿ. ಬೊರಸೆ ನೇತೃತ್ವದಲ್ಲಿ ರವಿವಾರ ಫರಂಗಿಪೇಟೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಫರಂಗಿಪೇಟೆಯ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳ ಮಹಪೂರವೇ ಹರಿದುಬಂದಿತ್ತು. ಬಸ್ ನಿಲ್ದಾಣದ ಎದುರಿನ ಜಾಗದಲ್ಲಿ ಆಟೊ ರಿಕ್ಷಾ, ಬೈಕ್ ಸಹಿತ ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುವುದರಿಂದ ಬಸ್ಗಳು ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂಬ ದೂರುಗಳೂ ಸಾರ್ವಜನಿಕರಿಂದ ಕೇಳಿ ಬಂದಿತ್ತು. ಸಾರ್ವಜನಿಕರ ದೂರಿಗೆ ಕೂಡಲೇ ಸ್ಪಂದಿಸಿದ ಎಸ್ಪಿ ಇಲ್ಲಿನ ಟ್ರಾಫಿಕ್ ಸುವ್ಯವಸ್ಥೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ಪೊಲೀಸ್ ಇಲಾಖೆಗೆ ಸೂಚಿಸಿದ್ದರು.  
ಇದರಂತೆ ಸೋಮವಾರದಿಂದ ಕಾರ್ಯಾಚರಣೆಗಿಳಿದ ಬಂಟ್ವಾಳ ಟ್ರಾಫಿಕ್ ಪೊಲೀಸರು ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿರುವ ಬಸ್ ನಿಲ್ದಾಣದ ಎದುರು ಪಾರ್ಕಿಂಗ್ ಮಾಡುವ ಖಾಸಗಿ ವಾಹನಗಳಿಗೆ ದಂಡ ವಿಧಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಮಂಗಳೂರಿನಿಂದ ಬಿ.ಸಿ.ರೋಡಿಗೆ ಸಂಚಾರಿಸುವ ಬಸ್ಗಳು ಹೆದ್ದಾರಿಯಲ್ಲೇ ಪಾರ್ಕಿಂಗ್ ಮಾಡುತ್ತಿದ್ದು ಇನ್ನು ಮುಂದೆ ಅಲ್ಲಿನ ಬರಕೆ ಕಾಂಪ್ಲೆಕ್ಸ್ ನ ಎದುರಿನ ಖಾಲಿ ಜಾಗದಲ್ಲಿ ಬಸ್ ಗಳನ್ನು ನಿಲ್ಲುವಂತೆ ಮಾಡಲು ಇಂದು ಬೆಳಗ್ಗೆ ಖಾಲಿ ಜಾಗದಲ್ಲಿದ್ದ ಗೂಡಂಗಡಿ, ತಳ್ಳುಗಾಡಿಗಳನ್ನು ಪೊಲೀಸರು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸ್ಥಳೀಯ ಪ್ರಮುಖರು ತೆರವು ಕಾರ್ಯಾಚರಣೆಗೆ ಆಕ್ಷೇಪ ವ್ಯಕ್ತಪಡಿಸಿದರು. ಬಡವರು ತಮ್ಮ ಹೊಟ್ಟೆ ಪಾಡಿಗಾಗಿ ಹಲವು ವರ್ಷಗಳಿಂದ ಗೂಡಂಗಡಿ ಹಾಗೂ ತಳ್ಳು ಗಾಡಿಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದು ಅವುಗಳನ್ನು ತೆರವುಗೊಳಿಸುವುದರಿಂದ ಬಡ ಕುಟುಂಬಗಳು ಬೀದಿಗೆ ಬರುತ್ತದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಲವೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಸ್ಥಳಕ್ಕೆ ಬಂದ ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಎ.ಕೆ.ರಕ್ಷಿತ್ ಗೌಡ ಹಾಗೂ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಸ್ಥಳೀಯರನ್ನು ಮನವೊಲಿಸುವಲ್ಲಿ ಯಶಸ್ವಿಯಾದರು. ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಸರಿಪಡಿಸಲು ರಸ್ತೆ ಅಗಲೀಕರಣ ಅತ್ಯಗತ್ಯವಾಗಿದ್ದು ಇದಕ್ಕೆ ಸಾರ್ವಜನಿಕರು ಸಹಕರಸಬೇಕು ಎಂದು ಮನವಿ ಮಾಡಿದರು.

ಪಿಡಿಒ ಮೊಬೈಲ್ ಸ್ವಿಚ್ಆಫ್
ಬುಧವಾರ ಬೆಳಗ್ಗೆ ಫರಂಗಿಪೇಟೆ ರಸ್ತೆ ಬದಿಯ ಗೂಡಂಗಡಿ, ತಳ್ಳುಗಾಡಿಗಳನ್ನು ಪೊಲೀಸರು ಏಕಾಏಕಿ ತೆರವುಗೊಳಿಸುತ್ತಿದ್ದಂತೆ ವ್ಯಾಪಾರಿಗಳು ಹಾಗೂ ನಾಗರಿಕರು ವಿರೋಧ ವ್ಯಕ್ತಪಡಿಸಿದರು. ಬಳಿಕ ಕೆಲವೊತ್ತು ತೆರವು ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಈ ಸಂದರ್ಭದಲ್ಲಿ ವ್ಯಾಪಾರಿಗಳು ಹಾಗೂ ನಾಗರಿಕರು ಪುದು ಗ್ರಾಮ ಪಂಚಾಯತ್ ಪಿಡಿಒಗೆ ಕರೆ ಮಾಡಿ ಸ್ಥಳಕ್ಕೆ ಬರುವಂತೆ ಮನವಿ ಮಾಡಿದರು. ಆ ಬಳಿಕವೂ ಜನರು ಹತ್ತಾರು ಬಾರಿ ಪಿಡಿಒಗೆ ಕರೆ ಮಾಡಿ ಸ್ಥಳಕ್ಕೆ ಬಂದು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವಂತೆ ಬೇಡಿಕೊಂಡರೂ ಅವರು ಸ್ಥಳಕ್ಕೆ ಬಂದಿಲ್ಲ. ಬಳಿಕ ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಸ್ವಿಚ್ಆಫ್ ಆಗಿರುವುದನ್ನು ಕಂಡ ವ್ಯಾಪಾರಿಗಳು ಹಾಗೂ ಸ್ಥಳೀಯರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

See also  ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆ

ಫರಂಗಿಪೇಟೆಯಲ್ಲಿ ಹದೆಗೆಟ್ಟಿರುವ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣಕ್ಕೆ ಯಾವುದೇ ವಿರೋಧವಿಲ್ಲ. ಆದರೆ ಇಲ್ಲಿನ ರಸ್ತೆ ಬದಿಯಲ್ಲಿ ಹಲವು ವರ್ಷಗಳಿಂದ ಕುಟುಂಬದ ಹೊಟ್ಟೆಪಾಡಿಗಾಗಿ ಗೂಡಂಗಡಿ, ತಳ್ಳುಗಾಡಿಗಳನ್ನಿಟ್ಟು ವ್ಯಾಪಾರ ನಡೆಸುತ್ತಿರುವವರನ್ನು ಬಡವರನ್ನು ಏಕಾಏಕಿ ತೆರವುಗೊಳಿಸುವುದು ಸರಿಯಲ್ಲ. ಮೊದಲು ಬೀದಿ ಬದಿಯ ಬಡ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬಳಿಕ ರಸ್ತೆ ಅಗಲಗೊಳಿಸುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳು ಮುಂದಾಗಬೇಕು.
– ಇಕ್ಬಾಲ್ ಅಮೆಮಾರ್, ಮಾಜಿ ಗ್ರಾಪಂ ಸದಸ್ಯ
 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು