ಬಂಟ್ವಾಳ: ಅಕ್ರಮವಾಗಿ ಗಾಂಜಾ ಸಾಗಾಟಮಾಡುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ, ಬಂಧಿಸಿದ್ದಾರೆ. ಬಂಧಿತರನ್ನು ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ನಿವಾಸಿ ಇಮ್ರಾನ್ ಎನ್ ಹಾಗೂ ಸಾಲೆತ್ತೂರು ಮೆದು ನಿವಾಸಿ ಜಲಾಲುದ್ದಿನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ತಾಲೂಕಿನ ಮಂಚಿ ಗ್ರಾಮದ ಪತ್ತುಮುಡಿ ಎಂಬಲ್ಲಿ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಈ ದಾಳಿ ನಡೆಸಿದ್ದು, ಆರೋಪಿಗಳಿಂದ 1 ಕೆ.ಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ವೃತ್ತನಿರೀಕ್ಷಕ ಮಂಜಯ್ಯ ನೇತೃತ್ವದಲ್ಲಿ ಗ್ರಾಮಾಂತರ ಪೊಲೀಸ್ ಸಿಬ್ಬಂದಿಯಾದ ಜಯರಾಮ, ಮಾಧವ, ಸುರೇಶ್ ಜಗದೀಶ, ನಜೀರ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.